Thursday, September 24, 2020
Home ಸುದ್ದಿ ಜಾಲ ಕರ್ನಾಟಕದಲ್ಲಿ ಏಮ್ಸ್ ಮಾದರಿ ಆಸ್ಪತ್ರೆ: ಸಚಿವ ಡಾ. ಹರ್ಷವರ್ಧನ್

ಇದೀಗ ಬಂದ ಸುದ್ದಿ

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಏಮ್ಸ್ ಮಾದರಿ ಆಸ್ಪತ್ರೆ: ಸಚಿವ ಡಾ. ಹರ್ಷವರ್ಧನ್

 ಬಳ್ಳಾರಿ: ‘ರಾಜ್ಯದಲ್ಲಿ ಏಮ್ಸ್ ಮಾದರಿ ಆಸ್ಪತ್ರೆಯನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಯೋಜನೆಗೆ ಹಣಕಾಸು ಇಲಾಖೆ ಅನುಮತಿಯು ಶೀಘ್ರ ದೊರೆಯಲಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದರು.

ಪ್ರಧಾನ ಮಂತ್ರಿ ಸ್ವಾಸ್ಥ್ಯ‌ಸುರಕ್ಷಾ ಯೋಜನೆ ಅಡಿ ನಗರದಲ್ಲಿ ₹150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಟ್ರಾಮಾ ಕೇರ್ ಸೆಂಟರ್ ಅನ್ನು ಸೋಮವಾರ ಆನ್ ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ‌ರು.

‘ದೇಶಕ್ಕೆ ಸ್ವಾತಂತ್ರ್ಯ ದೊರಕಿ ದಶಕಗಳು ಕಳೆದರೂ ಏಮ್ಸ್ ಮಾದರಿ ಆಸ್ಪತ್ರೆ ಒಂದೇ ಇತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದಲ್ಲಿ 22 ಏಮ್ಸ್ ಆಸ್ಪತ್ರೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈಗಾಗಲೇ 7 ಆಸ್ಪತ್ರೆಗಳನ್ನು ದೇಶದ ವಿವಿಧೆಡೆ ಆರಂಭಿಸಲಾಗಿದೆ’ ಎಂದರು.

‘ನಾಲ್ಕು ವರ್ಷದಲ್ಲಿ ದೇಶದಲ್ಲಿ 57 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವ ಮೂಲಕ ಆಸ್ಪತ್ರೆಗಳಲ್ಲಿ ವೈದ್ಯರ ಸಮಸ್ಯೆ ನೀಗಿಸುವ ಪ್ರಯತ್ನ ನಡೆದಿದೆ. ಪ್ರಸಕ್ತ ವರ್ಷ ಚಿಕ್ಕಬಳ್ಳಾಪುರ, ಯಾದಗಿರಿ, ಚಿಕ್ಕಮಗಳೂರು ಸೇರಿದಂತೆ ನಾಲ್ಕು ಕಡೆ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು’ ಎಂದರು.

‘ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್ ಅವರು ಸಚಿವರಾಗಿದ್ದ ಅವಧಿಯಲ್ಲೇ ಬಳ್ಳಾರಿಯಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭಕ್ಕೆ ಮಂಜೂರಾತಿ ನೀಡಿದ್ದರು’ ಎಂದು ಸ್ಮರಿಸಿದರು.

TRENDING