Thursday, September 24, 2020
Home ಬೆಂಗಳೂರು ಕೊರೊನಾ ಸೋಂಕಿತರ ಮನೆ ಮುಂದೆ ಭಿತ್ತಿಪತ್ರ ಅಂಟಿಸಲ್ಲ: ಆಯುಕ್ತ ಎನ್.ಮಂಜುನಾಥ ಪ್ರಸಾದ್

ಇದೀಗ ಬಂದ ಸುದ್ದಿ

ಕೊರೋನಾ ಸೋಂಕು: ಕಾಂಗ್ರೆಸ್ ಶಾಸಕ ನಾರಾಯಣರಾವ್ ಸ್ಥಿತಿ...

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಕೊರೋನಾ ಸೋಂಕು...

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ...

ವಿಜಯಪುರ: ಜಿಲ್ಲೆ ಪೊಲೀಸರು ಎಎಸ್ ಪಿ ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಬಳುಸುತ್ತಿದ್ದ 3 ಮೊಬೈಲ್, ಸಿಗರೇಟ್, ತಂಬಾಕು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ಕೊರೊನಾ ಸೋಂಕಿತರ ಮನೆ ಮುಂದೆ ಭಿತ್ತಿಪತ್ರ ಅಂಟಿಸಲ್ಲ: ಆಯುಕ್ತ ಎನ್.ಮಂಜುನಾಥ ಪ್ರಸಾದ್

ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯ ಮನೆ ಮುಂದೆ ಭಿತ್ತಿ ಪತ್ರ ಅಂಟಿಸುವುದರಿಂದ ಮತ್ತು ಆ ಪ್ರದೇಶಗಳನ್ನು ಬ್ಯಾರಿಕೇಡ್ ಅಳವಡಿಸಿ ಸೀಲ್‌ಡೌನ್ ಮಾಡುವುದರಿಂದ ಆಸುಪಾಸಿನವರು ಸೋಂಕಿತರ ಮನೆಯವರನ್ನು ಕೆಟ್ಟದಾಗಿ ನೋಡುವ ಪರಿಸ್ಥಿತಿ ಇತ್ತು. ಇದನ್ನು ತಪ್ಪಿಸಲು, ಸೋಂಕಿತರ ಮನೆ ಮುಂದೆ ಭಿತ್ತಿಪತ್ರ ಅಂಟಿಸುವುದನ್ನು ಕೈಬಿಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಭಿತ್ತಿಪತ್ರ ಅಂಟಿಸುವ ಬದಲು, ಸೋಂಕು ದೃಢಪಟ್ಟ ಬಗ್ಗೆ ಸುತ್ತ-ಮುತ್ತಲಿನ ಮನೆಯವರಿಗೆ ಮಾಹಿತಿ ನೀಡಲಾಗುವುದು. ಈ ಬಗ್ಗೆ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದ್ದೇವೆ.

ಪಾಲಿಕೆ ವ್ಯಾಪ್ತಿಯ ಕಂಟೈನ್ಮೆಂಟ್ ಪ್ರದೇಶಗಳಲ್ಲಿ 100 ಮೀಟರ್ ವ್ಯಾಪ್ತಿಯಲ್ಲಿ ಒಂದೆರಡು ಪ್ರಕರಣಗಳು ಪತ್ತೆಯಾದರೆ ಅಂತಹ ಕಡೆ ಬ್ಯಾರಿಕೇಡ್ ಅಳವಡಿಸಿ ಸೀಲ್‌ಡೌನ್ ಮಾಡುವುದಿಲ್ಲ. ೩ಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬರುವ ಪ್ರದೇಶದಲ್ಲಿ ಮಾತ್ರ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ನಗರದಲ್ಲಿ ಕೇವಲ ಒಂದೆರಡು ಸಕ್ರಿಯ ಕೋವಿಡ್ ಪ್ರಕರಣಗಳಿರುವ 17,159 ಕಡೆ ಬ್ಯಾರಿಕೇಡ್ ಅಳವಡಿಸಿಲ್ಲ. ಮೂರಕ್ಕಿಂತ ಹೆಚ್ಚು ಪ್ರಕರಣಗಳಿರುವ 1,018 ಕಡೆ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತರು ಮಾಹಿತಿ ನೀಡಿದ್ದಾರೆ.

ಅಲ್ಲದೇ ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದಾಗಿ ಭಯಪಡುವ ಅಗತ್ಯವಿಲ್ಲ. ಪ್ರತಿನಿತ್ಯ ನಡೆಸುವ ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿರುವುದು ಇದಕ್ಕೆ ಕಾರಣವಾಗಿದ್ದು, ಹೆಚ್ಚು ಪರೀಕ್ಷೆ ಮಾಡುವುದರಿಂದ ಸೋಂಕು ದೃಢಪಟ್ಟವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು ಸುಲಭ. ಸೋಂಕು ಹರಡುವಿಕೆ ಇದರಿಂದ ಕಡಿಮೆಯಾಗಲಿದೆ ಎಂದು ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.

TRENDING