Monday, September 28, 2020
Home ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣ: ಮೂರು ಕಡೆ ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ

ಇದೀಗ ಬಂದ ಸುದ್ದಿ

ರೈತರಿಗೆ ಯಾವುದೇ ಅನ್ಯಾಯವಾಗಲು ಬಿಡಲ್ಲ; ಸಿಎಂ ಬಿ.ಎಸ್....

 ಬೆಂಗಳೂರು: ಭೂ ಸುಧಾರನಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ನಾಯಕರ ಪಿತೂರಿಯಿಂದ ನಡೆಯುತ್ತಿರುವ ಪ್ರತಿಭಟನೆಗಳಾಗಿವೆ. ನನ್ನಿಂದ ರೈತ ಸಮುದಾಯಕ್ಕೆ...

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಡಿಜೆ ಹಳ್ಳಿ ಗಲಭೆ ಪ್ರಕರಣ: ಮೂರು ಕಡೆ ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು , ಸೆಪ್ಟೆಂಬರ್ 02; ಕೇವಲ ಒಂದು ವಿವಾದಾತ್ಮಕ ಫೇಸ್ ಬುಕ್ ಪೋಸ್ಟನ್ನೇ ನೆಪವಾಗಿಸಿಕೊಂಡು ನಡೆದ ಗಲಭೆ ಹಿಂದಿನ ಮೂಲ ಪತ್ತೆಗೆ ಪೊಲೀಸ್ರು ಮುಂದಾಗಿದ್ದಾರೆ. ಈ ನಡುವೆ ಸಿಸಿಬಿ ತನ್ನ ಪಾಡಿಗೆ ತಾನು ಸದ್ದಿಲ್ಲದೇ ತನಿಖೆ ನಡೆಸುತ್ತಲೇ ಇದ್ದು,ಇದೀಗ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಮೂರು ಕಡೆಗಳಲ್ಲಿ ಏಕಾಏಕಿ ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ ಎಂದು ಹೇಳಲಾಗುತ್ತಿದೆ.

ಎಸ್ಡಿಪಿಐ ಕಚೇರಿಗಳ ಮೇಲೆ ಸಿಸಿಬಿ ಸಂಘಟಿತ ಅಪರಾಧ ದಳ ಎಸಿಪಿ ಬಿ.ಜಗನ್ನಾಥ್ ರೈ ನೇತೃತ್ವದಲ್ಲಿ, ಹಾಗೂ ನಾರ್ಕೋಟಿಕ್ ದಳದ ಎಸಿಪಿ ಗೌತಮ್ ನೇತೃತ್ವದಲ್ಲಿ ಸಿಬ್ಬಂದಿ ಸೇರಿ ಮೂರು ತಂಡಗಳಾಗಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಹಲಸೂರು ಗೇಟ್ ಮುಖ್ಯ ಕಚೇರಿ ಬಳಿಯ ಎಸ್ಡಿಪಿಐ ಕಚೇರಿ ಸಿಸಿಬಿ ತಲಾಶ್ ನಡೆಸಲಾಗಿದೆ. ನ್ಯಾಯಾಲಯ ದಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದಾಗ, ಕಚೇರಿಗಳಲ್ಲಿ ಕೇವಲ ಕೆಲಸಗಾರರೇ ಇದ್ದರು. ಯಾವ ಮುಖಂಡರು ಇರಲಿಲ್ಲ. ಆದ್ರೆ ಲ್ಯಾಪ್ ಟಾಪ್, ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಕೆಲ ಫೈಲ್ ಗಳನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಎಸ್ಡಿಪಿಐ ಸಂಘಟನೆಯಿಂದ ಎಲ್ಲೆಲ್ಲಿ ಸಭೆ ನಡೆಸಲಾಗಿತ್ತು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹೀಗಾಗಿಯೇ ಸದ್ದಿಲ್ಲದೆ ಸಿಸಿಬಿ ತನ್ನ ಕಾರ್ಯ ಮುಂದುವರೆಸಿದೆ.

TRENDING