Wednesday, September 23, 2020
Home ದೆಹಲಿ ಸೆ.7ರಿಂದ ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರದ ಮಾರ್ಗಸೂಚಿ ಬಿಡುಗಡೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸೆ.7ರಿಂದ ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದೆ. ಸೆ.7ರಿಂದ ಬೆಂಗಳೂರು ನಗರ ಸೇರಿದಂತೆ ದೇಶದ ವಿವಿಧ ಮಹಾನಗರಗಳಲ್ಲಿ ಮೆಟ್ರೊ ರೈಲುಗಳ ಸಾರ್ವಜನಿಕ ಸೇವೆ ಆರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ‘ಕೆಲವು ನಿಬಂಧನೆಗಳ ಜೊತೆಗೆ, ವಿವಿಧ ಹಂತಗಳಲ್ಲಿ ಮೆಟ್ರೊ ರೈಲು ಸಂಚಾರ ಸೇವೆಗಳು ಆರಂಭವಾಗಲಿದೆ. ಮೊದಲಿಗೆ ಕೆಲವೇ ಮಾರ್ಗಗಳಲ್ಲಿ ರೈಲುಗಳು ಕಾರ್ಯನಿರ್ವಹಿಸಲಿವೆ’ ಎಂದು ತಿಳಿಸಿದ್ದಾರೆ.
ಪ್ರಯಾಣಿಕರು ಮಾಸ್ಕ್ಗಳನ್ನು ಧರಿಸುವುದು ಕಡ್ಡಾಯವಾಗಿದ್ದು, ಆರೋಗ್ಯ ಸೇತು ಆಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಜನರ ಆಯ್ಕೆಗೆ ಬಿಟ್ಟಿದ್ದು ಎಂದು ಸಚಿವ ಪುರಿ ಹೇಳಿದ್ದಾರೆ.
ಮೆಟ್ರೊ ಪುನರಾರಂಭಕ್ಕೆ ಕೇಂದ್ರ ನೀಡಿರುವ ಮಾರ್ಗಸೂಚಿಯಲ್ಲಿ ಏನಿದೆ?

  • ಕಂಟೈನ್ಮೆಂಟ್ ವಲಯಗಳಲ್ಲಿನ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸಂಪೂರ್ಣವಾಗಿ ಮುಚ್ಚಬೇಕು
  • ದೈಹಿಕ ಅಂತರ ಖಚಿತಪಡಿಸಿಕೊಳ್ಳಲು, ನಿಲ್ದಾಣಗಳಲ್ಲಿ ಮತ್ತು ರೈಲುಗಳ ಒಳಗೆ ಸೂಕ್ತವಾದ ಸಾಂಕೇತಿಕ ಗುರುತುಗಳನ್ನು ಮಾಡಬೇಕು
  • ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್ ಇಲ್ಲದೇ ಬರುವ ವ್ಯಕ್ತಿಗಳ ಬಳಿ ಹಣ ಪಾವತಿಸಿಕೊಂಡು ಮಾಸ್ಕ್ ಪೂರೈಸುವ ವ್ಯವಸ್ಥೆಯನ್ನು ಮೆಟ್ರೊ ರೈಲು ನಿಗಮಗಳು ಮಾಡಬಹುದು.
  • ನಿಲ್ದಾಣಗಳಿಗೆ ಪ್ರವೇಶಿಸುವ ವ್ಯಕ್ತಿಗಳ ಉಷ್ಣ ತಪಾಸಣೆ ನಡೆಸಬೇಕು. ರೋಗಲಕ್ಷಣವಿಲ್ಲದ ವ್ಯಕ್ತಿಗಳಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಬೇಕು. ರೋಗಲಕ್ಷಣವಿರುವ ವ್ಯಕ್ತಿಗಳಿಗೆ ಪರೀಕ್ಷೆ ಅಥವಾ ವೈದ್ಯಕೀಯ ತಪಾಸನೆಗಾಗಿ ಹತ್ತಿರದ ಆರೈಕೆ ಕೇಂದ್ರ / ಆಸ್ಪತ್ರೆಗೆ ಹೋಗಲು ಸೂಚಿಸಬೇಕು. ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆಯನ್ನು ಪ್ರೋತ್ಸಾಹಿಸಬೇಕು.
  • ನಿಲ್ದಾಣಗಳಿಗೆ ಪ್ರವೇಶಿಸುವಾಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಒದಗಿಸಬೇಕು. ಮೆಟ್ರೊ ರೈಲು ಮತ್ತು ನಿಲ್ದಾಣಗಳಲ್ಲಿನ ಉಪಕರಣಗಳು, ಲಿಫ್ಟ್, ಎಸ್ಕಲೇಟರ್ಗಳು ಮತ್ತು ಶೌಚಾಲಯಗಳನ್ನು ನಿಯಮಿತವಾಗಿ ಸ್ಯಾನಿಟೈಸ್ ಮಾಡಬೇಕು.
  • ಸ್ಮಾರ್ಟ್ ಕಾರ್ಡ್ ಬಳಕೆ ಮತ್ತು ನಗದು ರಹಿತ ಆನ್ಲೈನ್ ವಹಿವಾಟುಗಳನ್ನು ಪ್ರೋತ್ಸಾಹಿಸಬೇಕು. ಸರಿಯಾಗಿ ಶುಚಿಗೊಳಿಸಿದ ಟೋಕನ್ಗಳು ಮತ್ತು ಚೀಟಿಗಳನ್ನು ಬಳಸಬೇಕು.
  • ಜನದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲ ನಿಲ್ದಾಣಗಳಲ್ಲಿ ರೈಲು ನಿಲುಗಡೆಯನ್ನು ತಪ್ಪಿಸುವ ನಿರ್ಧಾರಗಳನ್ನು ಮೆಟ್ರೊ ರೈಲು ನಿಗಮಗಳು ಕೈಗೊಳ್ಳಬಹುದು.
  • ಮಾಧ್ಯಮ, ಸಾಮಾಜಿಕ ಜಾಲತಾಣ, ಪೋಸ್ಟರ್, ಬ್ಯಾನರ್, ಹೋರ್ಡಿಂಗ್, ವೆಬ್ಸೈಟ್ ಇತ್ಯಾದಿಗಳ ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಾಹಿತಿ ಮತ್ತು ಸಂವಹನ ಅಭಿಯಾನವನ್ನು ಪ್ರಾರಂಭಿಸಬೇಕು.
  • ನಿಲ್ದಾಣದ ಹೊರಗಿನ ಜನಸಂದಣಿ ನಿಯಂತ್ರಿಸಲು ಮತ್ತು ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಪೊಲೀಸ್ ಮತ್ತು ಸ್ಥಳೀಯ ಆಡಳಿತದೊಂದಿಗೆ ಮೆಟ್ರೋ ರೈಲು ನಿಗಮಗಳು ನಿಕಟ ಸಂಪರ್ಕ ಹೊಂದಿರಬೇಕು.
  • ಮೆಟ್ರೊ ಸಂಚಾರವನ್ನು ಶ್ರೇಣೀಕೃತ ರೀತಿಯಲ್ಲಿ ಪುನರಾರಂಭಿಸಬೇಕು. ಒಂದಕ್ಕಿಂತ ಹೆಚ್ಚು ಮಾರ್ಗಗಳನ್ನು ಹೊಂದಿರುವ ಮೆಟ್ರೊಗಳು ಸೆಪ್ಟೆಂಬರ್ 7, 2020ರಿಂದ ಸಂಚರಿಸಬೇಕು. ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಮಾರ್ಗಗಳಲ್ಲಿ ಸೆಪ್ಟೆಂಬರ್ 12, 2020ರೊಳಗೆ ರೈಲುಗಳು ಕಾರ್ಯ ನಿರ್ವಹಿಸಬೇಕು.

TRENDING