Wednesday, September 23, 2020
Home ಕ್ರೈಂ ನ್ಯೂಸ್ ದಲಿತ ಯುವಕನ ಕೊಲೈಗೈದ ಮನೆಗಳ ಮೇಲೆ ಪೋಲಿಸರ ದಾಳಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ದಲಿತ ಯುವಕನ ಕೊಲೈಗೈದ ಮನೆಗಳ ಮೇಲೆ ಪೋಲಿಸರ ದಾಳಿ

ಮೇ ತಿಂಗಳಲ್ಲಿ ಗೋಕಾಕಿನ ಆದಿಜಾಂಬವ ನಗರದಲ್ಲಿ ನಡೆದ ದಲಿತ ಮುಖಂಡ ಸಿದ್ದಪ್ಪ ಅರ್ಜುನ ಕನಮಡ್ಡಿ ಕೊಲೆ ಪ್ರಕರಣದಲ್ಲಿ ಪೊಲೀಸರು ಟೈಗರ್ ಗ್ಯಾಂಗಿನ 9 ಮಂದಿಯನ್ನು ಬಂಧಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡಿದ್ದರಲ್ಲಿ ರೂ.30.48 ಲಕ್ಷ ನಗದು, 1 ಪಿಸ್ತೂಲ್, 20 ಜೀವಂತ ಗುಂಡುಗಳು, 4 ತಳವಾರಗಳು, 3 ಜಂಬೆ, 22 ಸಿಮ್ ಕಾರ್ಡ್ ಸೇರಿದಂತೆ ಅನೇಕ ದಾಖಲೆಗಳು ಸೇರಿವೆ.

ಗೋಕಾಕಿನ ಡಿವೈಎಸ್ಪಿ ಕಚೇರಿಯಲ್ಲಿ ಈ ಕುರಿತಂತೆ ಇಂದು ವಿವರಣೆ ನೀಡಿದ ಎಸ್ಪಿ ಲಕ್ಷ್ಮಣ ನಿಂಬರಗಿ, ಆರೋಪಿಗಳು 2006 ರಲ್ಲಿ ಸಕ್ರಿಯವಾಗಿದ್ದ ಟೈಗರ್ ಗ್ಯಾಂಗ್ ಎನ್ನುವ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು, ವ್ಯವಸ್ಥಿತವಾಗಿ ಸಂಚು ರೂಪಿಸಿ ಅಪರಾಧಗಳನ್ನು ಎಸಗುತ್ತಿರುವುದು ಮತ್ತು ಯುವಕರ ಮೇಲೆ ಪ್ರಭಾವ ಬೀರಿ ತಮ್ಮ ಸಂಘಟನೆಯ ಅಪರಾಧಿಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಕಂಡು ಬಂದಿದೆ ಎಂದು ತಿಳಿಸಿದರು. ಆರೋಪಿತರು ಸಾರ್ವಜನಿಕರಲ್ಲಿ ಭಯ ಉಂಟು ಮಾಡುವುದು, ಸಾಕ್ಷಿದಾರರನ್ನು ಹೆದರಿಸುವುದು ಹಾಗೂ ಪುರಾವೆಗಳನ್ನು ನಾಶಪಡಿಸುವಲ್ಲಿ ನಿಸ್ಸೀಮರಾಗಿರುತ್ತಾರೆ. ಹಾಗಾಗಿ ಆರೋಪಿಗಳ ಮೇಲೆ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 ಕಲಂ 3 ಮತ್ತು 4 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ನಿಂಬರಗಿ ಹೇಳಿದರು.

ಬಂಧಿತ ಆರೋಪಿಗಳು ಹೀಗಿದ್ದಾರೆ: ಗಂಗಾಧರ ಸಂತ್ರಾಮ ಶಿಂಧೆ (26), ವಿನಾಯಕ ಬಸವರಾಜ ಹಡಗಿನಾಳ (22), ವಿಠ್ಠಲ ಪರಶುರಾಮ ಪವಾರ (23), ವಿನೋದ ಚಂದ್ರು ಹೊಸಮನಿ (22), ಕಿರಣ ವಿಜಯ ದೊಡ್ಡಣ್ಣವರ (22), ರವಿ ಭೀಮಶಿ ಚೂನನ್ನವರ (22), ಕೇದಾರಿ ಬಸವಣ್ಣಿ ಜಾಧವ (36), ಸುನಿಲ ಮಲ್ಲಿಕಾರ್ಜುನ ಮುರಕಿಭಾವಿ (43) ಮತ್ತು ಸಂತೋಷ ಪಾಂಡುರಂಗ ಚಿಗಡೊಳ್ಳಿ (21). ಎಲ್ಲರೂ ಗೋಕಾಕ ನಗರದವರು.

ಮನೋಹರ ಮೇಗೇರಿ

ದಿ ನ್ಯೂಸ್ 24 ಕನ್ನಡ,ಗೋಕಾಕ

TRENDING