Wednesday, September 23, 2020
Home ದೆಹಲಿ JEE, NEET ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

JEE, NEET ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ,ಸೆ .04: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಮತ್ತು ಜಂಟಿ ಪ್ರವೇಶ ಪರೀಕ್ಷೆ(JEE) ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಶುಕ್ರವಾರ ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗಾವೈ ಮತ್ತು ನ್ಯಾ.ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠವು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ಕಳೆದ ಆಗಸ್ಟ್.17ರಂದು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನಡುವೆ ಜನರ ಬದುಕು ನಿಂತಿಲ್ಲ. ನೀಟ್, ಜೆಇಇ ಪರೀಕ್ಷೆ ಮುಂದೂಡುವ ಮೂಲಕ ವಿದ್ಯಾರ್ಥಿಗಳ ಜೀವನವನ್ನು ಅಪಾಯಕ್ಕೆ ಒಡ್ಡುವುದು ಬೇಡ ಎಂದು ತೀರ್ಪು ನೀಡಿತ್ತು.

ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್ ಗೆ ಅರ್ಜಿ:
ಸಪ್ಟೆಂಬರ್ ತಿಂಗಳಿನಲ್ಲೇ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬಾರದು. ಬದಲಿಗೆ ಈ ದಿನಾಂಕವನ್ನು ಮುಂದೂಡುವಂತೆ ಆಗಸ್ಟ್.28ರಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು. ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು. ಕೊವಿಡ್-19 ಆತಂಕದ ನಡುವೆ ಪರೀಕ್ಷೆಗಳನ್ನು ನಡೆಸಕೂಡದು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದವು.

ನೀಟ್, ಜಿಇಇ ವಿದ್ಯಾರ್ಥಿಗಳು ಮತ್ತು ಕೇಂದ್ರಗಳ ಮಾಹಿತಿ:
ಜೆಇಇ ಮುಖ್ಯ ಪರೀಕ್ಷಗಳನ್ನು ಸಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, 9.53 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆಗಾಗಿ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಿದ್ದಾರೆ. ನೀಟ್ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಿದ್ದಾರೆ. ಇದರ ನಡುವೆ ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.

TRENDING