Monday, September 28, 2020
Home ಅಂತರ್ ರಾಜ್ಯ ‘ಶ್ರೀಲಂಕಾ ಸಮುದ್ರ ಭಾಗದಲ್ಲಿ ಹೊತ್ತಿ ಉರಿದ ತೈಲ ಟ್ಯಾಂಕರ್’

ಇದೀಗ ಬಂದ ಸುದ್ದಿ

ರೈತರಿಗೆ ಯಾವುದೇ ಅನ್ಯಾಯವಾಗಲು ಬಿಡಲ್ಲ; ಸಿಎಂ ಬಿ.ಎಸ್....

 ಬೆಂಗಳೂರು: ಭೂ ಸುಧಾರನಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ನಾಯಕರ ಪಿತೂರಿಯಿಂದ ನಡೆಯುತ್ತಿರುವ ಪ್ರತಿಭಟನೆಗಳಾಗಿವೆ. ನನ್ನಿಂದ ರೈತ ಸಮುದಾಯಕ್ಕೆ...

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

‘ಶ್ರೀಲಂಕಾ ಸಮುದ್ರ ಭಾಗದಲ್ಲಿ ಹೊತ್ತಿ ಉರಿದ ತೈಲ ಟ್ಯಾಂಕರ್’

ಕೊಲಂಬೋ, ಸೆಪ್ಟೆಂಬರ್ 4: ಕುವೈತ್ನಿಂದ ಭಾರತಕ್ಕೆ ತೈಲ ಹೊತ್ತು ತರುತ್ತಿದ್ದ ನೌಕೆಯೊಂದು ಶ್ರೀಲಂಕಾದ ಪೂರ್ವ ಕರಾವಳಿ ಸಮೀಪ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ನೌಕೆಯಲ್ಲಿದ್ದ 23 ಸಿಬ್ಬಂದಿ ಪೈಕಿ ಒಬ್ಬರು ಕಣ್ಮರೆಯಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಕೇರಳ ತನ್ನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ನ (ಐಒಸಿ) ಪನಾಮಾ ನೋಂದಣಿಯ ಆಯಿಲ್ ಟ್ಯಾಂಕರ್ ‘ನ್ಯೂ ಡೈಮಂಡ್’ 2,70,000 ಮೆಟ್ರಿಕ್ ಟನ್ನಷ್ಟು ಕಚ್ಚಾ ತೈಲವನ್ನು ಕುವೈತ್ನಿಂದ ಭಾರತಕ್ಕೆ ಹೊತ್ತು ತರುತ್ತಿತ್ತು. ಪೂರ್ವ ಜಿಲ್ಲೆ ಅಂಪಾರದಲ್ಲಿ ಸಂಘಮಂಕಂದ ಕರಾವಳಿ ಸಮೀಪ ಅದರ ಎಂಜಿನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರ ಸರಕು ಪ್ರದೇಶಕ್ಕೆ ಯಾವುದೇ ಹಾನಿಯಾಗಿಲ್ಲ.

ಸಮುದ್ರದಲ್ಲಿ ತೈಲ ಸೋರಿಕೆಯಾಗಿದ್ದರೆ ತನ್ನ 600 ಕಿ.ಮೀ ಚದರ ಕರಾವಳಿ ಪ್ರದೇಶಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಘಟನೆಯ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಭಾರತ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರಕ್ಕೆ (ಐಎನ್ಸಿಒಐಎಸ್) ಕೇರಳ ಸರ್ಕಾರ ಕೋರಿದೆ. ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಈ ಸಂಬಂಧ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಪ್ರಾಥಮಿಕ ಅಧ್ಯಯನ ಪ್ರಕಾರ ಸಮುದ್ರಕ್ಕೆ ಸೋರಿಕೆಯಾದ ತೈಲವು ಶೀಘ್ರದಲ್ಲಿಯೇ ಕೇರಳ ತೀರಕ್ಕೆ ತಲುಪಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ. ಸಮುದ್ರದ ಪ್ರಸ್ತುತ ಚಲನೆಯ ದಿಕ್ಕು ಮತ್ತು ಗಾಳಿಯ ವೇಗವನ್ನು ಇದು ಅವಲಂಬಿಸಿದೆ. ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿದ್ದರೆ ರಾಜ್ಯದ ಮೀನುಗಾರಿಕೆ ವಲಯ ಹಾಗೂ ಪರಿಸರಕ್ಕೆ ಅಪಾರ ಹಾನಿಯಾಗಲಿದೆ. ತೈಲ ಸೋರಿಕೆ ಸಂಕಷ್ಟ ಸಂಭವಿಸಿದರೆ ಅದನ್ನು ಎದುರಿಸುವ ಯಾವುದೇ ವ್ಯವಸ್ಥೆ ಕೇರಳದಲ್ಲಿಲ್ಲ.
ಕೂಡಲೇ ಸಮುದ್ರದ ಭಾಗಕ್ಕೆ ಧಾವಿಸಿದ ಶ್ರೀಲಂಕಾ ನೌಕಾಪಡೆ ಬೆಂಕಿಯನ್ನು ನಂದಿಸಿ ಸಿಬ್ಬಂದಿಯನ್ನು ರಕ್ಷಿಸಿದೆ. ಹೆಚ್ಚಿನ ಅನಾಹುತ ಸಂಭವಿಸದಂತೆ ಅದು ತಡೆದಿದೆ. ಫಿಲಿಪ್ಪೈನ್ ಮೂಲದ ಒಬ್ಬ ಸಿಬ್ಬಂದಿ ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡ ಮತ್ತೊಬ್ಬ ಫಿಲಿಪ್ಪೈನ್ ಪ್ರಜೆಯನ್ನು ರಕ್ಷಿಸಲಾಗಿದೆ. ಅವರನ್ನು ಕಲ್ಮುನೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶ್ರೀಲಂಕಾದ ನೌಕಾಪಡೆ ತಿಳಿಸಿದೆ. ನೌಕಾ ಪಡೆಗಳು ಟ್ಯಾಂಕರ್ನ ನಾಯಕ ಮತ್ತು ಇತರೆ ಸಿಬ್ಬಂದಿಯನ್ನು ರಕ್ಷಿಸಿದೆ. ಅವರ ದೇಶದ ವಿವರಗಳನ್ನು ಬಹಿರಂಗಪಡಿಸಿಲ್ಲ.

TRENDING