Wednesday, September 23, 2020
Home ರಾಜ್ಯ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 20 ಮನೆ: ಸಚಿವ ವಿ.ಸೋಮಣ್ಣ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 20 ಮನೆ: ಸಚಿವ ವಿ.ಸೋಮಣ್ಣ

 ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಿ ಕೊಡಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇದಲ್ಲದೆ, ರಾಜೀವ್‌ಗಾಂಧಿ ವಸತಿ ನಿಗಮದ ಮೂಲಕ 1.56 ಲಕ್ಷ ಮನೆಗಳನ್ನು ಬಡವರಿಗಾಗಿ ನಿರ್ಮಿಸಿಕೊಡಲಾಗುವುದು ಎಂದು ಅವರು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದ 188 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ 16ರೊಳಗೆ 97,134 ಮನೆಗಳ ನಿರ್ಮಾಣದ ಕಾಮಗಾರಿ
ಯನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸರ್ಕಾರ ರಾಜ್ಯಕ್ಕೆ 1.80 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುದಾನ ನೀಡಿ ನಾಲ್ಕು ವರ್ಷಗಳು ಕಳೆದಿವೆ. ಈಗ 34,900 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸುವುದಾಗಿ ಅವರು ತಿಳಿಸಿದರು.

ರಾಜ್ಯದ 1,700ಕ್ಕೂ ಹೆಚ್ಚು ಕೊಳೆಗೇರಿಗಳಲ್ಲಿ 3.12 ಲಕ್ಷ ಮನೆಗಳನ್ನು ಸಕ್ರಮಗೊಳಿಸಲಾಗುತ್ತಿದೆ. ಅಲ್ಲದೆ, ಏಳು ಸಾವಿರ ಎಕರೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುವುದು. ಇದರಿಂದ 3.16 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

ಕ್ಯಾಬಿನೆಟ್ಗಿಂತ ನೀವು ದೊಡ್ಡವರಾ?

‘ಸರ್ಕಾರ ಬಡವರಿಗೆ ಮನೆ ಕಟ್ಟಿಕೊಡಲು ತೀರ್ಮಾನಿಸಿದರೆ. ನೀವು ಅವುಗಳಿಗೆ ತಡೆ ಹಾಕಿಕೊಂಡು ಕೂರಬಾರದು. ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡರೂ ಕಡತಗಳು ಮುಂದಕ್ಕೆ ಹೋಗುತ್ತಿಲ್ಲ. ನೀವು ಕ್ಯಾಬಿನೆಟ್‌ಗಿಂತಲೂ ದೊಡ್ಡವರೇ’ ಎಂದು ಸೋಮಣ್ಣ ಸಭೆಯಲ್ಲಿ ಪ್ರಶ್ನಿಸಿದರು.

‘ಬಡವರಿಗೆ ಮನೆ ಕಟ್ಟಿಸಿಕೊಡುವ ವಿಚಾರದಲ್ಲಿ ಯಾರೂ ಅಡ್ಡಿ ಮಾಡಬಾರದು. ಒಂದು ವೇಳೆ ಅಡ್ಡಿ ಮಾಡಿದರೆ, ನಾವೇನು ಮಾಡಬೇಕೋ ಅದನ್ನೇ ಮಾಡುತ್ತೇವೆ. ನಿಮಗೆ ಸಮಸ್ಯೆ ಎನಿಸಿದರೆ ನಿಮ್ಮ ದಾರಿ ನೀವು ನೋಡಿಕೊಳ್ಳಬಹುದು. ನಾನು ಇಲ್ಲಿ ಕೆಲಸ ಮಾಡಲು ಬಂದಿದ್ದೇನೆ ಅಷ್ಟೇ. ಸರ್ಕಾರ ಹಾಕಿಕೊಂಡ ಗುರಿಯನ್ನು ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಮನೆಗಳನ್ನು ಹಂಚಿಕೆ ಮಾಡುವುದರಲ್ಲಿ ತಡ ಆಗಬಾರದು’ ಎಂದು ಅವರು ಖಡಕ್ಕಾಗಿ ಹೇಳಿದರು.

TRENDING