Monday, September 28, 2020
Home ಕೋವಿಡ್-19 ಭಾರತದಲ್ಲಿ 40 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಭಾರತದಲ್ಲಿ 40 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಹೊಸದಿಲ್ಲಿ : ಭಾರತದಲ್ಲಿ 30 ಲಕ್ಷ ಕೊರೋನ ವೈರಸ್ ಸೋಂಕು ಪ್ರಕರಣಗಳು ದಾಖಲಾದ ಕೇವಲ 13 ದಿನಗಳಲ್ಲಿ ಮತ್ತೆ 10 ಲಕ್ಷ ಪ್ರಕರಣಗಳು ಸೇರ್ಪಡೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ.

ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶುಕ್ರವಾರ ಮತ್ತೊಂದು ದಾಖಲೆ ನಿರ್ಮಾಣವಾಗಿದ್ದು, ಇದುವರೆಗಿನ ಗರಿಷ್ಠ ಅಂದರೆ 87,800 ಪ್ರಕರಣಗಳು ಶುಕ್ರವಾರ ಸೇರ್ಪಡೆಯಾಗಿವೆ. ಸತತ ಮೂರನೇ ದಿನ ದೇಶದಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ.

ಅಮೆರಿಕ ಹಾಗೂ ಬ್ರೆಝಿಲ್ ದೇಶಗಳನ್ನು ಹೊರತುಪಡಿಸಿದರೆ 40 ಲಕ್ಷ ಪ್ರಕರಣಗಳು ವರದಿಯಾದ ಮೂರನೇ ದೇಶವಾಗಿ ಭಾರತ ಸೇರ್ಪಡೆಯಾಗಿದೆ. ಭಾರತದಲ್ಲಿ ಮೊದಲ 10 ಲಕ್ಷ ಪ್ರಕರಣಗಳು ದಾಖಲಾಗಲು ಸುಧೀರ್ಘ ಅವಧಿ (168 ದಿನ) ತೆಗೆದುಕೊಂಡಿದ್ದು, ಬಳಿಕ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ.

ದೇಶದಲ್ಲಿ 10 ಲಕ್ಷ ಇದ್ದ ಪ್ರಕರಣಗಳು ಕೇವಲ 50 ದಿನಗಳಲ್ಲಿ 40 ಲಕ್ಷಕ್ಕೆ ಬೆಳೆದಿವೆ. ಬ್ರೆಝಿಲ್‌ನಲ್ಲಿ ಈ ಪ್ರಮಾಣದ ಬೆಳವಣಿಗೆಗೆ 75 ದಿನ ತೆಗೆದುಕೊಂಡಿದ್ದರೆ, ಅಮೆರಿಕದಲ್ಲಿ 86 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 40 ಲಕ್ಷಕ್ಕೇರಿತ್ತು. ಕೊನೆಯ 10 ಲಕ್ಷ ಪ್ರಕರಣಗಳು ಅತ್ಯಂತ ಕ್ಷಿಪ್ರ ಅವಧಿಯಲ್ಲಿ ವರದಿಯಾಗಿದ್ದು, ಕೇವಲ 13 ದಿನಗಳಲ್ಲಿ 10 ಲಕ್ಷ ಪ್ರಕರಣ ದಾಖಲಾಗಿದೆ. ಇದುವರೆಗಿನ ದಾಖಲೆ ಅಮೆರಿಕ ಹಾಗೂ ಭಾರತದ ಜಂಟಿ ಹೆಸರಿನಲ್ಲಿದ್ದು, 16 ದಿನಗಳಲ್ಲಿ 10 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಆದಾಗ್ಯೂ ಸೋಂಕಿತರ ಪೈಕಿ ಮೃತಪಟ್ಟವರ ದರ ಈ ಮೂರು ದೇಶಗಳ ಪೈಕಿ ಭಾರತದಲ್ಲೇ ಕನಿಷ್ಠ. 40 ಲಕ್ಷ ಒಟ್ಟು ಸೋಂಕಿತರ ಪೈಕಿ ಭಾರತದಲ್ಲಿ ಮೃತಪಟ್ಟವರು 69,552. ಇದೇ ಹಂತದಲ್ಲಿ ಅಮೆರಿಕದಲ್ಲಿ 1.4 ಲಕ್ಷ ಮಂದಿ ಹಾಗೂ ಬ್ರೆಝಿಲ್‌ನಲ್ಲಿ 1.2 ಲಕ್ಷ ಮಂದಿ ಸೋಂಕಿಗೆ ಬಲಿಯಾಗಿದ್ದರು.

TRENDING