Sunday, September 20, 2020
Home ಅಂತರ್ ರಾಜ್ಯ ಭಾರತಕ್ಕೆ ಅಭಿನಂದನೆ, ನನ್ನ ಮಗನನ್ನು ಬಂಧಿಸಿದ್ದೀರಿ: ರಿಯಾ ತಂದೆಯ ನೋವಿನ ಮಾತು!

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಭಾರತಕ್ಕೆ ಅಭಿನಂದನೆ, ನನ್ನ ಮಗನನ್ನು ಬಂಧಿಸಿದ್ದೀರಿ: ರಿಯಾ ತಂದೆಯ ನೋವಿನ ಮಾತು!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್​ ಸಾವಿನ ಪ್ರಕರಣದಲ್ಲಿ ಮಾದಕ ದ್ರವ್ಯ ಜಾಲದ ಆಯಾಮದ ತನಿಖೆ ನಡೆಸುತ್ತಿರುವ ಮಾದಕದ್ರವ್ಯ ನಿಯಂತ್ರಣ ದಳ (ಎನ್​ಸಿಬಿ) ಸುಶಾಂತ್​ ಗೆಳತಿ ರಿಯಾ ಚಕ್ರವರ್ತಿ ಸಹೋದರನನ್ನು ಬಂಧಿಸಿದ್ದು, ಇದನ್ನು ರಿಯಾ ತಂದೆ ಇಂದ್ರಜಿತ್​ ಚಕ್ರವರ್ತಿ ಖಂಡಿಸಿದ್ದಾರೆ.

ಭಾರತಕ್ಕೆ ಅಭಿನಂದನೆಗಳು, ನೀವು ನನ್ನ ಮಗನನ್ನು ಬಂಧಿಸಿದ್ದೀರಿ, ಮುಂದೆ ನನ್ನ ಮಗಳನ್ನು ಬಂಧಿಸುತ್ತೀರಿ ಎಂಬುದು ಖಾತ್ರಿಯಾಗಿದೆ ಮತ್ತು ಅದರ ನಂತರ ಯಾರು ಎಂಬುದರ ಬಗ್ಗೆ ನನಗೆ ತಿಳಿದಿಲ್ಲ ಎಂದು ಇಂದ್ರಜಿತ್​ ಮಗನ ಬಂಧನವನ್ನು ಟೀಕಿಸಿದ್ದಾರೆ.

ಮಧ್ಯಮ ವರ್ಗದ ಕುಟುಂಬವನ್ನು ನೀವು ಪರಿಣಾಮಕಾರಿಯಾಗಿ ನಿರ್ನಾಮ ಮಾಡಿದ್ದೀರಿ. ಆದರೆ ಸಹಜವಾಗಿ, ನ್ಯಾಯದ ಸಲುವಾಗಿ ಎಲ್ಲವೂ ಸಮರ್ಥನೆಯಾಗಿದೆ. ಜೈಹಿಂದ್​ ಎನ್ನವ ಮೂಲಕ ನಿವೃತ್ತ ಲೆಫ್ಟಿನೆಂಟ್​ ಕರ್ನಲ್​ ಆಗಿರುವ ರಿಯಾ ತಂದೆ ಇಂದ್ರಜಿತ್​ ಅಧಿಕಾರಿಗಳ ಕ್ರಮವನ್ನು ಖಂಡಿಸಿದ್ದಾರೆ.

ಅಂದಹಾಗೆ ಇಂದ್ರಜಿತ್​ ಅವರ ಮಗ ಶೋವಿಕ್​ ಚಕ್ರವರ್ತಿಯನ್ನು ಎನ್​ಸಿಬಿ ಶುಕ್ರವಾರ ಬಂಧಿಸಿದೆ. ಶೋವಿಕ್​ ಒಟ್ಟಿಗೆ ಸುಶಾಂತ್​ ಸಿಂಗ್​ ಹೌಸ್​ ಮ್ಯಾನೇಜರ್​ ಸಾಮ್ಯುಯೆಲ್​ ಮಿರಾಂಡನನ್ನು ಬಂಧಿಸಲಾಗಿದ್ದು, ಇಬ್ಬರ ವಿರುದ್ಧ ಮಾದಕ ದ್ರವ್ಯ ವಿರೋಧಿ ವಿವಿಧ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಬುಧವಾರದವರೆಗೂ ಇಬ್ಬರನ್ನು ಎನ್​ಸಿಬಿ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದೆ.

ಶೋವಿಕ್​ ಬಳಿ ಇದುವರೆಗೂ ಯಾವುದೇ ಡ್ರಗ್ಸ್​ ಪತ್ತೆಯಾಗಿಲ್ಲ ಮತ್ತು ಎನ್‌ಸಿಬಿಯು ಅಬ್ಬಾಸ್ ಲಖಾನಿ ಮತ್ತು ಕರಣ್ ಅರೋರಾ ಎಂಬ ಇಬ್ಬರು ವ್ಯಕ್ತಿಗಳಿಂದ 59 ಗ್ರಾಂ ಕ್ಯುರೇಟೆಡ್ ಗಾಂಜಾವನ್ನು ಪತ್ತೆಹಚ್ಚಿದ್ದು, ಸುಶಾಂತ್ ಸಿಂಗ್‌ಗೆ ಹತ್ತಿರ ಇರುವವರೊಂದಿಗೆ ಅವರು ಹೊಂದಿದ್ದ ಸಂಪರ್ಕದ ಬಗ್ಗೆ ಎನ್​ಸಿಬಿಗೆ ತಿಳಿದುಬಂದಿದೆ. ಹೀಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣದಲ್ಲಿ ರಿಯಾಗೂ ಎನ್​ಸಿಬಿ ಸಮನ್ಸ್​ ನೀಡುವ ಸಾಧ್ಯತೆಯು ಇದೆ.

TRENDING