Sunday, September 20, 2020
Home ಬೆಂಗಳೂರು ಸೆ.15ರಿಂದ ಬಿಐಇಸಿ ಯ ಕೋವಿಡ್ ಆರೈಕೆ ಕೇಂದ್ರ ಮುಚ್ಚಲು ನಿರ್ಧಾರ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಸೆ.15ರಿಂದ ಬಿಐಇಸಿ ಯ ಕೋವಿಡ್ ಆರೈಕೆ ಕೇಂದ್ರ ಮುಚ್ಚಲು ನಿರ್ಧಾರ

ಬೆಂಗಳೂರು, ಸೆ 06: ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆರಂಭಿಸಿರುವ ಕೋವಿಡ್ ಆರೈಕೆ ಕೇಂದ್ರವನ್ನು ಮುಚ್ಚಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಜೊತೆ ನಡೆದ ಸಭೆ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 15ರಿಂದ ಮಾದಾವರ ಬಳಿ ಇರುವ ಬಿಐಇಸಿ ಕೋವಿಡ್ ಆರೈಕೆ ಕೇಂದ್ರವನ್ನು ಮುಚ್ಚಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 10 ಸಾವಿರ ಹಾಸಿಗೆಗಳನ್ನು ಹೊಂದಿರುವ ದೊಡ್ಡ ಆರೈಕೆ ಕೇಂದ್ರವಿದು.

ಈ ಕೋವಿಡ್ ಆರೈಕೆ ಕೇಂದ್ರಕ್ಕೆ ಇತ್ತೀಚಿನ ದಿನಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆ ಆಗಿದೆ. ಆರೈಕೆ ಕೇಂದ್ರವನ್ನು ಮುಚ್ಚಿ ಸದ್ಯ ಅದರಲ್ಲಿ ಇರುವ ರೋಗಿಗಳನ್ನು ಬೇರೆ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಆರೈಕೆ ಕೇಂದ್ರ ಮುಚ್ಚಲು ಒಪ್ಪಿಗೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಶನಿವಾರ 3093 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,44,757. ಸಕ್ರಿಯ ಪ್ರಕರಣಗಳ ಸಂಖ್ಯೆ 41,479. ಕೋವಿಡ್ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಬಯಸುತ್ತಿದ್ದಾರೆ. ಆದ್ದರಿಂದ, ಆರೈಕೆ ಕೇಂದ್ರಗಳಿಗೆ ಯಾರೂ ದಾಖಲಾಗುತ್ತಿಲ್ಲ.

TRENDING