Wednesday, September 23, 2020
Home ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗ: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಚಿತ್ರದುರ್ಗ: ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಚಿತ್ರದುರ್ಗ : ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ರಾಂಪುರ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 04 ರಂದು ದಾಳಿ ಮಾಡಿದ್ದ ರಾಂಪುರ ಪೊಲೀಸರ ದಾಳಿ ವೇಳೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ರುದ್ರೇಶ್ ನನ್ನು ಬಂಧಿಸಲಾಗಿದೆ. ಜೊತೆಗೆ 9871.73 ಕೆ.ಜಿ ತೂಕದ 8250 ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿ ನಿವಾಸಿಯಾಗಿರು ರುದ್ರೇಶ್, ರಾಂಪುರದ ಬಳಿ ಜಮೀನು ಗುತ್ತಿಗೆ ಪಡೆದು ಗಾಂಜಾ ಬೆಳೆದಿದ್ದನು. ಇದು ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ.

ರಾಂಪುರದ ಡಿ.ಬಿ ಮಂಜುನಾಥ್, ವೈ.ಜಂಬುನಾಥ್, ಡಿ.ವೈ ಮಂಜುನಾಥ್ ಎಂಬುವರಿಗೆ ಸೇರಿದ 04 ಎಕರೆ 20 ಗುಂಟೆ ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿದ್ದು, ಮಧ್ಯವರ್ತಿ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಮಹದೇವಪುರ ನಿವಾಸಿ ಸಮಂತಗೌಡ ಜಮೀನನ್ನು ಗುತ್ತಿಗೆ ಕೊಡಿಸಿದ್ದನು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ರಾಂಪುರ ಠಾಣೆ ಪಿಎಸ್‌ಐ ಗುಡ್ಡಪ್ಪ ನೇತೃತ್ವದ ತಂಡ, ಜಮೀನು ಮಾಲೀಕರು, ಮಧ್ಯವರ್ತಿ ಸೇರಿದಂತೆ ಪ್ರಮುಖ ಆರೋಪಿ ರುದ್ರೇಶ್ ನನ್ನು ಬಂಧಿಸಿದ್ದಾರೆ. ಬಂಧಿತ ಐವರ ವಿರುದ್ಧ NDPS ಆಯಕ್ಟ್ ಕಲಂ 8 ಹಾಗಾ 20(a)(b) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  

TRENDING