Sunday, May 16, 2021
Homeಕೋವಿಡ್-19ರಾಜ್ಯದಲ್ಲಿ ಇಂದು 7576 ಪ್ರಕರಣ ಪತ್ತೆ, 97 ಮಂದಿ ಬಲಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು 7576 ಪ್ರಕರಣ ಪತ್ತೆ, 97 ಮಂದಿ ಬಲಿ

 ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7576 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ 97 ಮಂದಿ ಕೋವಿಡ್‌ಗೆ ಪ್ರಾಣ ತೆತ್ತಿದ್ದಾರೆ.

ಇದರೊಂದಿಗೆ ರಾಜ್ಯದ ಒಟ್ಟಾರೆ ಕೋವಿಡ್‌ ಪ್ರಕರಣಗಳ ಸಂಖ್ಯೆ 475265 ಕ್ಕೆ ಏರಿದ್ದು, ಸಾವಿನ ಸಂಖ್ಯೆ 7481 ಆಗಿದೆ.
ಇನ್ನು ಇಂದು ಒಂದೇ ದಿನ 7406 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವರೆಗೆ 3,69,229 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 98536 ಸೋಂಕು ಪ್ರಕರಣಗಳಷ್ಟೇ ಸಕ್ರೀಯವಾಗಿವೆ. ಸದ್ಯ 794 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 3084 ಪ್ರಕರಣಗಳು ಪತ್ತೆಯಾಗಿವೆ. 41 ಮಂದಿ ಮಹಾಮಾರಿಯಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 17,6712 ಕ್ಕೆ ಏರಿದೆ. ಒಟ್ಟು 2514 ಮಂದಿ ಮೃತಪಟ್ಟಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img