Tuesday, September 22, 2020
Home ಬೆಂಗಳೂರು ಡ್ರಗ್ಸ್ ಕೇಸ್: ಆದಿತ್ಯ ಆಳ್ವ ಮ್ಯಾನೇಜರ್ ಸಿಸಿಬಿ ವಶಕ್ಕೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಡ್ರಗ್ಸ್ ಕೇಸ್: ಆದಿತ್ಯ ಆಳ್ವ ಮ್ಯಾನೇಜರ್ ಸಿಸಿಬಿ ವಶಕ್ಕೆ

 ಬೆಂಗಳೂರುಡ್ರಗ್ಸ್ ಪ್ರಕರಣದ ಆರೋಪಿ, ನಾಪತ್ತೆಯಾಗಿರುವ ಮಾಜಿ‌ ಸಚಿವ ಸಿ.ಜೀವರಾಜ ಆಳ್ವ ಪುತ್ರ ಆದಿತ್ಯ ಆಳ್ವಾಗೆ ಸೇರಿದ ರೇಸಾರ್ಟ್ ನಲ್ಲಿ ಸಿಸಿಬಿ ದಾಳಿ ಅಂತ್ಯಗೊಂಡಿದ್ದು, ಈಗ ಆದಿತ್ಯ ಮ್ಯಾನೇಜರ್ ರಾಮ್ ದಾಸ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾಳಿ ವೇಳೆಯಲ್ಲಿ ರೆಸಾರ್ಟ್ ನಲ್ಲಿ ಮಾದಕ ವಸ್ತು ಪತ್ತೆಯಾಗಿದ್ದು, ಎರಡು ಲ್ಯಾಪ್ ಟಾಪ್, 1 ಕಂಪ್ಯೂಟರ್ ಸೇರಿ ಸಿಸಿಟಿವಿ, ಡಿವಿಆರ್ ಅನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ನಗರದ‌ ಹೆಬ್ಬಾಳದಲ್ಲಿರುವ 4 ಎಕರೆ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ಬೆಳಗ್ಗೆ ದಾಳಿ ನಡೆಸಿತ್ತು. ದಾಳಿ ವೇಳೆಯಲ್ಲಿ ತನಿಖಾಧಿಕಾರಿಗಳು ಮೂವರು ಕೆಲಸಗಾರರು ಸೇರಿ ಇಬ್ಬರೂ ಭದ್ರತಾ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಆರೋಪಿ ಆದಿತ್ಯ ಆಳ್ವಾ ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮೈದುನ. ಬರೋಬ್ಬರಿ ಆರು ಎಕರೆ ವಿಸ್ತೀರ್ಣದಲ್ಲಿ ಆದಿತ್ಯ ಆಳ್ವಾ ಮನೆ ಇದ್ದು. ಇದೇ ಮನೆಯಲ್ಲಿ ವಾರಾಂತ್ಯದ ಪಾರ್ಟಿಗಳು ನಡೆಯುತ್ತಿರುವ ಬಗ್ಗೆ ಆರೋಪಿ ರವಿಶಂಕರ್ ತಪ್ಪೊಪ್ಪಿಕೊಂಡಿದ್ದನು. ಇದಲ್ಲದೆ ಡ್ರಗ್ ಜಾಲದಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿರುವ ಆರು ಮಂದಿ ಆರೋಪಿಗಳು ಆದಿತ್ಯ ಆಳ್ವಾ ಹೆಸರನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ. ಡ್ರಗ್ ಜಾಲದಲ್ಲಿ ರವಿಶಂಕರ್ ಬಂಧನವಾಗುತ್ತಿದ್ದಂತೆ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಮುಂಬೈ ಅಥವಾ ದೆಹಲಿಯಲ್ಲಿರುವ ಅನುಮಾನಗಳು ವ್ಯಕ್ತವಾಗಿವೆ.

ಆದಿತ್ಯ ಆಳ್ವಾ ಮನೆಯಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ರಾಜಕಾರಣಿ ಮತ್ತು ಉದ್ಯಮಿಗಳ ಮಕ್ಕಳು ಸೇರಿದಂತೆ ಹಲವು ತಾರೆಯರು ಭಾಗಿಯಾಗುತ್ತಿದ್ದರು ಎನ್ನಲಾಗಿದೆ.

ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಆದಿತ್ಯ ಆಳ್ವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ಮನೆಯಲ್ಲೇ ಗಣ್ಯ ವ್ಯಕ್ತಿಗಳಿಗೆ ಪಾರ್ಟಿ ನಡೆಸಲಾಗುತ್ತಿತು. ಅಲ್ಲಿ ಗಾಂಜಾ ಮಾತ್ರೆ ಸೇವಿಸಲಾಗುತ್ತಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

TRENDING