Friday, September 25, 2020
Home ಜಿಲ್ಲೆ ಭಾರಿ ಕುತೂಹಲ ಕೆರಳಿಸಿದೆ ಸಿಎಂ ಬಿಎಸ್‍ವೈ ದೆಹಲಿ ಪ್ರವಾಸ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಭಾರಿ ಕುತೂಹಲ ಕೆರಳಿಸಿದೆ ಸಿಎಂ ಬಿಎಸ್‍ವೈ ದೆಹಲಿ ಪ್ರವಾಸ

ನೆರೆ ಪರಿಹಾರ, ವಿವಿಧ ಅಭಿವೃದ್ಧಿ ಯೋಜನೆಗಳು, ಸಂಪುಟ ವಿಸ್ತರಣೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರದ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ನವದೆಹಲಿಗೆ ತೆರಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಯಡಿಯೂರಪ್ಪ ಅವರೊಂದಿಗೆ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ದೆಹಲಿಗೆ ತೆರಳಲಿದ್ದಾರೆ.

ಸರಿಸುಮಾರು 6 ತಿಂಗಳ ಬಳಿಕ ದೆಹಲಿಗೆ ತೆರಳುತ್ತಿರುವ ಯಡಿಯೂರಪ್ಪ ಅವರು, ಈ ಬಾರಿ ಪ್ರಮುಖವಾಗಿ ಕೇಂದ್ರ ಸಚಿವರು ಹಾಗೂ ಬಿಜೆಪಿ ವರಿಷ್ಟರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವುದು ಈ ಹಿಂದಿನ ಭೇಟಿಗಿಂತಲೂ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ರಾಜ್ಯಕ್ಕೆ ಕೋವಿಡ್-19 ಅಧಿಕೃತವಾಗಿ ಬಂದ ನಂತರ ಸಿ.ಎಂ. ದೆಹಲಿಗೆ ಭೇಟಿ ಕೊಡಲು ಸಾಧ್ಯವಾಗಿರಲಿಲ್ಲ. ಹಲವು ಬಾರಿ ದೆಹಲಿಗೆ ತೆರಳಿ ಕೇಳಿಕೊಂಡಿದ್ದರೂ ವರಿಷ್ಟರು ಅನುಮತಿ ನೀಡಿರಲಿಲ್ಲ.

ಇದೀಗ ನಾಳೆಯಿಂದ ಒಟ್ಟು 3 ದಿನಗಳ ಕಾಲ ದೆಹಲಿಯಲ್ಲೇ ವಾಸ್ತ್ಯವ್ಯ ಹೂಡಲಿದ್ದು ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸುವರು. ನೆರೆ ಪರಿಹಾರ ಮತ್ತಿತರ ಉದ್ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ವಿವಿಧ ಸಚಿವರನ್ನು ಭೇಟಿ ಮಾಡಲಿರುವ ಅವರು ಸಂಪುಟ ಕಸರತ್ತಿನ ಬಗ್ಗೆ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ದಿ  ನ್ಯೂಸ್ 24 ಕನ್ನಡ

TRENDING