Saturday, July 31, 2021
Homeಬೆಂಗಳೂರುರಾಗಿಣಿ ಬಳಿಕ ಪರಪ್ಪನ ಜೈಲು ಪಾಲಾದ ಮತ್ತೋರ್ವ ನಟಿ: 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ...

ಇದೀಗ ಬಂದ ಸುದ್ದಿ

ರಾಗಿಣಿ ಬಳಿಕ ಪರಪ್ಪನ ಜೈಲು ಪಾಲಾದ ಮತ್ತೋರ್ವ ನಟಿ: 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಸಂಜನಾ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾಣಿ ಅವರನ್ನು 2 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಂಜನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ನಟಿಯನ್ನು ಇಂದು ಸಿಸಿಬಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಸಂಜನಾ ಅವರನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.

ಹೀಗಾಗಿ ನಟಿ ರಾಗಿಣಿ ದ್ವಿವೇದಿ ಬಳಿಕ ನಟಿ ಸಂಜನಾ ಕೂಡ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಸಂಜನಾ, ಕೇಂದ್ರ ಕಾರಾಗ್ರಹಕ್ಕೆ ಶಿಫ್ಟ್ ಆಗಲಿರುವ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ಸುಮಾರು ಅರ್ಧ ಕಿ.ಮೀ. ದೂರದವರೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img