Saturday, October 24, 2020
Home ರಾಜಕೀಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಹೈಕಮಾಂಡ್ ನಿರ್ಧಾರ:ಸಿಎಂ ಬಿಎಸ್‌ವೈ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಹೈಕಮಾಂಡ್ ನಿರ್ಧಾರ:ಸಿಎಂ ಬಿಎಸ್‌ವೈ

ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಮಾತನಾಡಿದ್ದಾರೆ.

ಇಂದು ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆ ಅಥವಾ ವಿಸ್ತರಣೆ ಕೇಂದ್ರ ನಾಯಕರ ನಿರ್ಧಾರದ ಮೇಲೆ ಅವಲಂಬಿಸಿದೆ. ಪ್ರಧಾನಿ ಮೋದಿ ಸೇರಿದಂತೆ ವರಿಷ್ಟರೊಂದಿಗೆ ಚರ್ಚಿಸಿ ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಲು ಸಿಎಂ ಯಡಿಯೂರಪ್ಪ ನಿರಾಕರಿಸಿದರು. ಪ್ರಧಾನಿ ಮೋದಿ ಹಾಗೂ ಕೇಂದ್ರದ ಇತರ ಸಚಿವರೊಂದಿಗೆ ರಾಜ್ಯದ ಅತಿವೃಷ್ಟಿ, ಹೆಚ್ಚಿನ ಅನುದಾನ ಬಿಡುಗಡೆ ಇತ್ಯಾದಿ ವಿಷಯಗಳನ್ನು ಚರ್ಚಿಸಲಾಗುವುದು. ಕೋವಿಡ್ ಸಂಕಷ್ಟದ ಕಾರಣದಿಂದಾಗಿ ಹಣಕಾಸಿನ ತೊಂದರೆಯಾಗಿದೆ ಎಂದರು.

ಇಷ್ಟೆಲ್ಲ ಸಮಸ್ಯೆಗಳಿದ್ದರೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಿಗದಿಗೊಳಿಸಿದ ಹಣ ಬಿಡುಗಡೆ ಮಾಡುತ್ತೇನೆ. ಇನ್ನೂ 300 ಕೋಟಿ ರೂಪಾಯಿ ಹಣವನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಬಿಡುಗಡೆ ಮಾಡುತ್ತೇನೆ ಎಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಕೊಟ್ಟರು. ಆ ಬಳಿಕ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.

TRENDING