Sunday, September 27, 2020
Home ಅಂತರ್ ರಾಜ್ಯ ಸಾಯುವ ಮುನ್ನ ಪೊಲೀಸರಿಗೆ ಕರೆ ಮಾಡಿದ್ದ ದಿಶಾ ಸಾಲಿಯನ್: ಶಾಸಕ ನಿತೇಶ್ ರಾಣೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸಾಯುವ ಮುನ್ನ ಪೊಲೀಸರಿಗೆ ಕರೆ ಮಾಡಿದ್ದ ದಿಶಾ ಸಾಲಿಯನ್: ಶಾಸಕ ನಿತೇಶ್ ರಾಣೆ

 ಮುಂಬೈ: ದಿಶಾ ಸಾಲಿಯನ್ ಸಾಯುವ ಮುನ್ನ ಮುಂಬೈ ಪೊಲೀಸರ ‘100’ ಸಂಖ್ಯೆಗೆ ಕರೆ ಮಾಡಿದ್ದರು ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ತಿಳಿಸಿದ್ದಾರೆ.

ದಿಶಾ ಅವರು ನಟ ಸುಶಾಂತ್‌ ಸಿಂಗ್‌ ರಜಪೂತ್ ಸೇರಿದ್ದಂತೆ ಸಿನಿಮಾ ನಟ-ನಟಿಯರಿಗೆ ಸೆಲೆಬ್ರಿಟಿ ಟ್ಯಾಲೆಂಟ್ ಮ್ಯಾನೇಜರ್ ಆಗಿದ್ದರು.

‘ಮುಂಬೈ ಪೊಲೀಸರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ನಡೆಸಿಲ್ಲ. ದಿಶಾ ಅವರು ಪಾರ್ಟಿ ಮುಗಿಸಿಕೊಂಡು ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮತ್ತು ಗೆಳೆಯ ರೋಹನ್‌ ರೈಗೆ ಕರೆ ಮಾಡಿದ್ದರು’ ಎಂದು ಶಾಸಕರು ಹೇಳಿದ್ದಾರೆ.

‘ಜುಹುವಿನಲ್ಲಿ ನಡೆದ ಪಾರ್ಟಿಯಲ್ಲಿ ತನಗಾದ ಸಮಸ್ಯೆಯ ಕುರಿತು ದಿಶಾ ಪೊಲೀಸರಿಗೆ ವಿವರಿಸಿದ್ದರು. ಇದೇ ವೇಳೆ ನಟ ಸುಶಾಂತ್‌ಗೂ ಕರೆ ಮಾಡಿ ಘಟನೆ ಬಗ್ಗೆ ಹೇಳಿದ್ದಾರೆ. ಸುಶಾಂತ್‌ ಈ ವಿಷಯವನ್ನು ರಿಯಾ ಬಳಿ ತಿಳಿಸಿದ್ದಾರೆ. ರಿಯಾ ಮಲಾದ್‌ನಲ್ಲಿದ್ದವರಿಗೆ ಈ ಸಂಬಂಧ ಮಾಹಿತಿ ನೀಡಿದ್ದಾರೆ. ದಿಶಾ ಮತ್ತು ಸುಶಾಂತ್‌ ಎರಡೂ ಸಾವಿನ ನಡುವೆ ಸಂಬಂಧವಿರುವ ಸಾಧ್ಯತೆ ಇದೆ’ ಎಂದು ಅವರು ದೂರಿದ್ದಾರೆ.

100ಕ್ಕೆ ಬರುವ ಪ್ರತಿ ಕರೆಯ ರೆಕಾರ್ಡ್‌ ಮಾಡಲಾಗುತ್ತದೆ. ಈ ಸಂಬಂಧ ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಜೂನ್‌ 8ರಂದು ಮುಂಬೈನ ಮಲಾದ್ ಉಪನಗರದ ಅಪಾರ್ಟ್‌ವೊಂದರ 12ನೇ ಮಹಡಿಯಿಂದ ಜಿಗಿದು ದಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

TRENDING