Friday, September 25, 2020
Home ರಾಜ್ಯ ಹಾವೇರಿ: ಗ್ರಾಮ ಆರೋಗ್ಯ ಸೇವಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಸೂಚನೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಹಾವೇರಿ: ಗ್ರಾಮ ಆರೋಗ್ಯ ಸೇವಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಸೂಚನೆ

ಹಾವೇರಿರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು 6,022 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ‘ಗ್ರಾಮ ಆರೋಗ್ಯ ಸೇವಾ ಕೇಂದ್ರ’ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಗ್ರಾಮ ಮತ್ತು ಗ್ರಾಮ ಪಂಚಾಯಿತಿ ಈ ಎರಡೂ ಹಂತಗಳಲ್ಲಿ ‘ಕಾರ್ಯಪಡೆ’ಗಳನ್ನು ರಚಿಸಿ, ಹಳ್ಳಿಗಳಲ್ಲಿ ಸೋಂಕು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಪಂಚಾಯತ್‌ರಾಜ್‌ ಆಯುಕ್ತಾಲಯ, ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ವೈದ್ಯಕೀಯ ಪರಿಕರ: ಪಲ್ಸ್‌ ಆಕ್ಸಿ ಮೀಟರ್‌, ಸಕ್ಕರೆಯ ಪ್ರಮಾಣ ಪರೀಕ್ಷಿಸುವ ಯಂತ್ರ (ಗ್ಲುಕೋ ಮೀಟರ್‌), ಬಿ.ಪಿ. ಮಾನಿಟರ್‌, ಥರ್ಮಲ್‌ ಸ್ಕ್ಯಾನರ್‌, ಪಿಪಿಇ ಕಿಟ್‌, ಗ್ಲೌಸ್‌, ಮಾಸ್ಕ್‌, ಸ್ಯಾನಿಟೈಸರ್‌ಗಳನ್ನು ಒಳಗೊಂಡ ವೈದ್ಯಕೀಯ ಪರಿಕರಗಳ ಕಿಟ್‌ ಅನ್ನು ಖರೀದಿಸಿ, ಎಲ್ಲ ಗ್ರಾಮ ಆರೋಗ್ಯ ಸೇವಾ ಕೇಂದ್ರಗಳಿಗೆ ವಿತರಣೆ ಮಾಡಲು ಕೂಡಲೇ ಕ್ರಮ ಕೈಗೊಳ್ಳ
ಬೇಕು. ಪರಿಕರಗಳನ್ನು ಈಗಾಗಲೇ ಖರೀದಿಸಿದ್ದರೆ, ಇದಕ್ಕೆ ಭರಿಸಿರುವ ವೆಚ್ಚವನ್ನು ಜಿಲ್ಲಾ ಪಂಚಾಯಿತಿ ಹಂತದಲ್ಲಿ ಕ್ರೋಡೀಕರಿಸಿ, ಮರುಪಾವತಿಗೆ ಪ್ರಸ್ತಾವ ಸಲ್ಲಿಸುವಂತೆ ಪಂಚಾಯತ್‌ ರಾಜ್‌ ಆಯುಕ್ತರು ತಿಳಿಸಿದ್ದಾರೆ.

1,500 ಆಕ್ಸಿ ಮೀಟರ್‌ ವಿತರಣೆ: ‘ಜಿಲ್ಲೆಯ 1,500 ಆಶಾ ಕಾರ್ಯಕರ್ತೆಯರಿಗೆ ಪಲ್ಸ್‌ ಆಕ್ಸಿ ಮೀಟರ್‌ಗಳನ್ನು ಖರೀದಿಸಿ, ವಿತರಿಸುತ್ತಿದ್ದೇವೆ. ಉಳಿದ ವೈದ್ಯಕೀಯ ಪರಿಕರಗಳ ದಾಸ್ತಾನು ಎಷ್ಟಿದೆ ಎಂಬುದನ್ನು ನೋಡಿಕೊಂಡು, ಅಗತ್ಯವಿರುವಷ್ಟು ಉಪಕರಣಗಳನ್ನು ಖರೀದಿಸುತ್ತೇವೆ ಎಂದು ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮಾಹಿತಿ ನೀಡಿದರು.

224 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷ, ಪಿಡಿಒ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ ‘ಕಾರ್ಯಪಡೆ’ಗಳನ್ನು ಈಗಾಗಲೇ ರಚಿಸಿದ್ದೇವೆ. ಗ್ರಾಮಮಟ್ಟದಲ್ಲೂ ಶಿಕ್ಷಕಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಡೆ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಹೇಳಿದರು.

TRENDING