Wednesday, September 23, 2020
Home ಜಿಲ್ಲೆ ದುರ್ಗಾದೇವಿಗೆ ಶ್ರೀರಾಮುಲು ಹರಕೆ ಪತ್ರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ದುರ್ಗಾದೇವಿಗೆ ಶ್ರೀರಾಮುಲು ಹರಕೆ ಪತ್ರ

ನನ್ನನ್ನು ಕರ್ನಾಟಕದ ಉಪಮುಖ್ಯಮಂತ್ರಿಯನ್ನಾಗಿ ಮಾಡು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿಗೆ ಪತ್ರ ಬರೆದು ದೇವರ ಮೊರೆಹೋಗಿದ್ದಾರೆ. ರಾಜ್ಯದಲ್ಲಿ ಎದ್ದಿರುವ ಡ್ರಗ್ಸ್ ಬಿರುಗಾಳಿಯ ಮಧ್ಯೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ಮುಖ್ಯಮಂತ್ರಿ ಬದಲಾವಣೆ ಸುದ್ದಿ ಕೂಡ ಬಹಳ ಸದ್ದು ಮಾಡುತ್ತಿದೆ. ಬಿಜೆಪಿ ಪ್ರಮುಖ ಶಾಸಕರು ಕೂಡ ಸೂಕ್ತ ಸ್ಥಾನಮಾನಕ್ಕಾಗಿ ತೆರೆಮೆರೆಯಲ್ಲಿ ಭಾರೀ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಡಿಸಿಎಂ ಸ್ಥಾನಕ್ಕಾಗಿ ಗಡೇ ದುರ್ಗಾದೇವಿ ಮೊರೆ ಹೋಗಿರುವ ಸಚಿವ ಬಿ .ಶ್ರೀರಾಮುಲು, ಡಿಸಿಎಂ ಸ್ಥಾನ ನೀಡು ಎಂದು ಇಂಗ್ಲಿಷ್ ನಲ್ಲಿ ಪತ್ರ ಬರೆದಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿದ್ದ ಶ್ರೀರಾಮುಲು, ದೇವಿಯ ದರ್ಶನಕ್ಕೆಂದೇ ಒಂದು ದಿನ ಮುಂಚೆಯೇ ಜಿಲ್ಲೆಗೆ ಬಂದಿದ್ದಾರೆ.

ನೇರವಾಗಿ ಗೋನಾಲಕ್ಕೆ ತೆರಳಿ ಗಡೇ ದುರ್ಗಾದೇವಿ ದರ್ಶನ ಪಡೆದು ಬಳಿಕ ದೇವಸ್ಥಾನದ ಪೂಜರಿ ಮರಿಸ್ವಾಮಿ ಅವರ ಮಾರ್ಗದರ್ಶನದಂತೆ, ದೇವಿಯ ಗರ್ಭಗುಡಿಯೊಳಗೆ ತೆರಳಿ ತಮ್ಮ ಪತ್ರವನ್ನು ದೇವಿಯ ಪಾದದ ಬಳಿ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುಂಚೆ ದೇವಸ್ಥಾನದ ಅರ್ಚಕ ಮರಿಸ್ವಾಮಿ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಅಲ್ಲಿ ಒಂದು ಹಂತದ ಮಾತುಕತೆ ಬಳಿಕ ದೇವಸ್ಥಾನಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್24 ಕನ್ನಡ

TRENDING