Wednesday, September 23, 2020
Home ಸುದ್ದಿ ಜಾಲ ಬೇರೆ ಬ್ಯಾಂಕ್‌ಗಳ ಜೊತೆ ಪಿಎಂಸಿ ಬ್ಯಾಂಕ್ ವಿಲೀನ ಯತ್ನ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಬೇರೆ ಬ್ಯಾಂಕ್‌ಗಳ ಜೊತೆ ಪಿಎಂಸಿ ಬ್ಯಾಂಕ್ ವಿಲೀನ ಯತ್ನ

ನವದೆಹಲಿ: ಹಗರಣದಲ್ಲಿ ಸಿಲುಕಿರುವ ಪಿಎಂಸಿ ಬ್ಯಾಂಕ್ ನ್ನು ಬೇರೆ ಬ್ಯಾಂಕ್‌ಗಳ ಜೊತೆ ವಿಲೀನ ಮಾಡುವ ಪ್ರಯತ್ನ ನಡೆದಿದೆ ಎಂದು ಪಿಎಂಸಿ ಬ್ಯಾಂಕಿನ ಆಡಳಿತಾಧಿಕಾರಿ, ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಎಂಸಿ ಬ್ಯಾಂಕ್‌ನಿಂದ ದೊಡ್ಡ ಮೊತ್ತದ ಸಾಲ ಪಡೆದು ಸುಸ್ತಿದಾರರಾಗಿರುವವರಿಂದ ಬಾಕಿ ವಸೂಲಿ ಮಾಡುವ ಪ್ರಕ್ರಿಯೆಗೆ ಕೋವಿಡ್-19 ಸಾಂಕ್ರಾಮಿಕವು ಅಡಚಣೆ ಉಂಟುಮಾಡಿದೆ.

ಪಿಎಂಸಿ ಬ್ಯಾಂಕಿನಲ್ಲಿ ಹಣಕಾಸಿನ ಅವ್ಯವಹಾರ ನಡೆದಿದ್ದು ಗೊತ್ತಾದ ನಂತರ ಆ ಬ್ಯಾಂಕಿನ ನಿಯಂತ್ರಣವನ್ನು ಆರ್‌ಬಿಐ ತನ್ನ ಅಧೀನಕ್ಕೆ ತೆಗೆದುಕೊಂಡಿದೆ. ಈ ಬ್ಯಾಂಕಿನಲ್ಲಿ ಠೇವಣಿ ಇರಿಸಿರುವವರು ₹ 1 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಹಿಂದಕ್ಕೆ ಪಡೆಯುವಂತಿಲ್ಲ ಎಂದು ಆರ್‌ಬಿಐ ಮಿತಿ ಹೇರಿದೆ.

‘ವಿಲೀನ ಕೋರಿಕೆಯನ್ನು ಇಟ್ಟುಕೊಂಡು ದೇಶದ ಪ್ರಮುಖ ಬ್ಯಾಂಕುಗಳ ಜೊತೆ ಮಾತುಕತೆ ನಡೆಸಲು ಪಿಎಂಸಿ ಬ್ಯಾಂಕ್ ಯತ್ನ ನಡೆಸಿದೆ’ ಎಂದು ಬ್ಯಾಂಕಿನ ಆಡಳಿತಾಧಿಕಾರಿ ಕೋರ್ಟ್‌ಗೆ ಸೆಪ್ಟೆಂಬರ್ 10ರಂದು ತಿಳಿಸಿದ್ದಾರೆ. ಯಾವ ಬ್ಯಾಂಕ್ ಜೊತೆ ಮಾತುಕತೆ ನಡೆದಿದೆ ಎಂಬುದರ ವಿವರವನ್ನು ಅವರು ನೀಡಿಲ್ಲ.

ಎಚ್‌ಡಿಐಎಲ್ ಮತ್ತು ಅದರ ಸಹವರ್ತಿ ಕಂಪನಿಗಳು ಪಿಎಂಸಿ ಬ್ಯಾಂಕಿಗೆ ಒಟ್ಟು ‌₹ 6,900 ಕೋಟಿ ಪಾವತಿಸಬೇಕು. ಆದರೆ, ಈ ಕಂಪನಿಗಳು ಸಾಲಕ್ಕೆ ಖಾತರಿಯಾಗಿ ನೀಡಿರುವ ಆಸ್ತಿಗಳ, ಭದ್ರತೆಗಳ ಮೊತ್ತ ₹ 1,160 ಕೋಟಿ ಮಾತ್ರ ಎಂದು ಕೋರ್ಟ್‌ಗೆ ತಿಳಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಆಡಳಿತಾಧಿಕಾರಿ, ಆರ್‌ಬಿಐ ಮತ್ತು ಎಚ್‌ಡಿಐಎಲ್‌ ನಿರಾಕರಿಸಿವೆ.

TRENDING