Saturday, October 24, 2020
Home ಕೋವಿಡ್-19 ಚಾಮರಾನಗರ : ಒಂದೇ ದಿನ 72 ಹೊಸ ಕೊರೊನಾ ಪ್ರಕರಣ ಪತ್ತೆ: ಇಬ್ಬರು ಸಾವು

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಚಾಮರಾನಗರ : ಒಂದೇ ದಿನ 72 ಹೊಸ ಕೊರೊನಾ ಪ್ರಕರಣ ಪತ್ತೆ: ಇಬ್ಬರು ಸಾವು

 ಚಾಮರಾಜನಗರಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿದೆ. ಕೋವಿಡ್‌ಯೇತರ ಕಾರಣದಿಂದ 22 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಒಟ್ಟು ಸೋಂಕಿತರ ಸಂಖ್ಯೆ 65ಕ್ಕೆ ತಲುಪಿದೆ.

ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ನಿವಾಸಿ 63 ವರ್ಷ ವ್ಯಕ್ತಿ ಸೆ.17ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. 18ರಂದು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಮಾದಾಪುರದ 72 ವರ್ಷದ ವೃದ್ಧ 17ರಂದು ಆಸ್ಪತ್ರೆಗೆ ದಾಖಲಾಗಿದ್ದು, 18ರಂದು ನಿಧನರಾಗಿದ್ದಾರೆ.

ಶನಿವಾರದ 72 ಪ್ರಕರಣಗಳೂ ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 3,418 ಪ್ರಕರಣಗಳು ವರದಿಯಾಗಿವೆ. ಗುಣಮುಖರಾದವರ ಸಂಖ್ಯೆ 2,717ಕ್ಕೆ ತಲುಪಿದೆ. 627 ಸಕ್ರಿಯ ಪ್ರಕರಣಗಳು ಇವೆ. 242 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದರೆ, 25 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ 716 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 319, ರ‍್ಯಾಪಿಡ್‌ ಆಯಂಟಿಜೆನ್‌ ಕಿಟ್‌ ಮೂಲಕ 362, ಟ್ರು ನಾಟ್‌ನಲ್ಲಿ 35 ಪರೀಕ್ಷೆಗಳನ್ನು ನಡೆಸಲಾಗಿದೆ. 646 ವರದಿಗಳು ನೆಗೆಟಿವ್‌ ಬಂದಿವೆ. 70 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

TRENDING