Saturday, October 24, 2020
Home ದಕ್ಷಿಣ ಕನ್ನಡ ಮಂಗಳೂರು ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್ ಕಿಶೋರ್ ಶೆಟ್ಟಿ ಅರೆಸ್ಟ್

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್ ಕಿಶೋರ್ ಶೆಟ್ಟಿ ಅರೆಸ್ಟ್

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ ಮಾದಕ ವಸ್ತು MDMA, ಬೈಕ್, ಮೊಬೈಲ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ‘ಈ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳಿದ್ದು, ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ, ಇಬ್ಬರ ಮೇಲೆ ಮಾದಕ ವಸ್ತು ಮಾರಾಟ ಮತ್ತು ಸೇವನೆ ಎರಡು ಪ್ರಕರಣ ದಾಖಲಿಸಿದ್ದೇವೆ’ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬಂಧಿತ ಆರೋಪಿ ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್(28) ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಊರಿಗೆ ಹಿಂತಿರುಗಿದ್ದಾನೆ. ಕಿಶೋರ್ ಶೆಟ್ಟಿ ಡ್ಯಾನ್ಸರ್ ಮತ್ತು ನೃತ್ಯ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ. ಅಕೀಲ್ ನೌಶೀಲ್ ಜೊತೆ ಸೇರಿ ಬೆಂಗಳೂರು ಮತ್ತು ಮುಂಬೈಯಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಶೋರ್ ಶೆಟ್ಟಿ ಅದ್ಭುತ ಡ್ಯಾನ್ಸರ್ ಜೊತೆಗೆ ನಟ ಕೂಡ ಹೌದು. ಬಾಲಿವುಡ್ ನ ಸೂಪರ್ ಹಿಟ್ ‘ABCD’ ಸಿನಿಮಾದಲ್ಲಿ ಕಿಶೋರ್ ನಟಿಸಿದ್ದಾರೆ. ಕಿಶೋರ್ ಸಾಕಷ್ಟು ಹುಡುಗಿಯರಿಗೆ ಡ್ರಗ್ಸ್ ನೀಡಿ ಪಾರ್ಟಿ ಮಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ಜೊತೆ ನಂಟಿರುವ ಕಿಶೋರ್ ನನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದು, ಯಾರ ಹೆಸರುಗಳನ್ನು ಬಹಿರಂಗಪಡಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ.

TRENDING