Wednesday, October 21, 2020
Home ಬೆಂಗಳೂರು ಮುಖ್ಯಮಂತ್ರಿಯಾಗಿದ್ದಾಗಲೇ ಕಾಂಗ್ರೆಸ್ ನಿರ್ನಾಮ ಮಾಡಿದ್ದ ಸಿದ್ದರಾಮಯ್ಯ: ಎಚ್ ಡಿಕೆ ಕಿಡಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಮುಖ್ಯಮಂತ್ರಿಯಾಗಿದ್ದಾಗಲೇ ಕಾಂಗ್ರೆಸ್ ನಿರ್ನಾಮ ಮಾಡಿದ್ದ ಸಿದ್ದರಾಮಯ್ಯ: ಎಚ್ ಡಿಕೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ಸಿದ್ದರಾಮಯ್ಯ ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಟೀಕಿಸಿ ಟ್ವೀಟ್ ಮಾಡಿರುವ ಎಚ್ ಡಿಕೆ, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ ಎಂದಿದ್ದಾರೆ.

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು. ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು ಎಂದು ಎಚ್ ಡಿಕೆ ತನ್ನ ಟ್ವೀಟ್ ನಲ್ಲಿ ಟೀಕಿಸಿದ್ದಾರೆ.

TRENDING