Tuesday, October 27, 2020
Home ಅಂತರ್ ರಾಷ್ಟ್ರೀಯ ಕೊರೊನಾ ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತಕ್ಕೆ ಅಗ್ರಸ್ಥಾನ

ಇದೀಗ ಬಂದ ಸುದ್ದಿ

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

ಕೊರೊನಾ ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತಕ್ಕೆ ಅಗ್ರಸ್ಥಾನ

ನವದೆಹಲಿಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತ ಅಗ್ರಸ್ಥಾನಕ್ಕೇರಿದೆ.

ಹೌದು.. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿಗೆ ತುತ್ತಾದವರ ಪೈಕಿ ಅತಿ ಹೆಚ್ಚು ಮಂದಿ ಭಾರತದಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಭಆರತ ಅಮೆರಿಕವನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ದೇಶದಲ್ಲಿ ಈ ವರೆಗೂ ಸೋಂಕಿನಿಂದ 43ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದು, ಇದು ಜಗತ್ತಿನಲ್ಲೇ ಅತೀ ಹೆಚ್ಚು ಪ್ರಮಾಣದ ಗುಣಮುಖರ ಸಂಖ್ಯೆಯಾಗಿದೆ.

ಅರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಪ್ರಸ್ತುತ 43, 14, 606 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದು, ಜಾಗತಿಕ ಒಟ್ಟಾರೆ ಕೋವಿಡ್ ಸೋಂಕಿತರ ಪೈಕಿ ಭಾರತದಲ್ಲಿ ಶೇ.19.00ರಷ್ಟು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಅಥೀ ಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈ ವರೆಗೂ 42, 25, 993 ಮಂದಿ ಸೋಂಕಿತರು ಗುಣಮುಖರಾಗಿದ್ದು, ಜಾಗತಿಕವಾಗಿ ಅಮೆರಿಕದ ಚೇತರಿಕೆ ಪ್ರಮಾಣ ಶೇ.18.70ರಷ್ಟಿದೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 38, 20, 095 ಮಂದಿ ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.16.90ರಷ್ಟಿದೆ. ರಷ್ಯಾದಲ್ಲಿ 9, 09, 357 ಮಂದಿ ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.4.00ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯಷ್ಟೇ ಭಾರತದಲ್ಲಿ ದಾಖಲೆಯ 94,612 ಮಂದಿ ಸೋಂಕಿತರು ಗುಣಮುಖರಾಗಿದ್ದರು. ಇದು ನಿನ್ನೆಯ ಹೊಸ ಸೋಂಕಿತರ ಸಂಖ್ಯೆಗಿಂತ ಹೆಚ್ಚು. ನಿನ್ನೆ 92,605 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿತ್ತು. ಆ ಮೂಲಕ ದೇಶದಲ್ಲಿನ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಗುಣಮುಖರ ಸಂಖ್ಯೆ 43,03,044ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಇನ್ನೂ 10,10,824 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ.

ಇನ್ನು ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54 ಲಕ್ಷ ಗಡಿ ದಾಟಿದೆ. ಅಂತೆಯೇ 1,133 ಮಂದಿ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.

TRENDING