Tuesday, October 27, 2020
Home ದೆಹಲಿ ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ ಕೋರಿ ಉಮರ್ ಸಲ್ಲಿಸಿದ್ದ ಅರ್ಜಿ ವಜಾ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ ಕೋರಿ ಉಮರ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ಅವರು, ಉಮರ್‌ನ ಅರ್ಜಿಯನ್ನು ಸೆ.19ರಂದು ವಜಾಗೊಳಿಸಿದ್ದಾರೆ.

ಉಮರ್ ಸೆ.24ರ ತನಕ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಸೆ. 13ರಂದು ಉಮರ್‌ನನ್ನು ಬಂಧಿಸಲಾಗಿದ್ದು, ಮರುದಿನವೇ ನ್ಯಾಯಾಲಯವು ಪೊಲೀಸರ ವಶದಲ್ಲಿದ್ದ ಉಮರ್‌ನನ್ನು ವಿಚಾರಣೆಗೊಳಪಡಿಸಲು ಅನುಮತಿ ನೀಡಿತ್ತು. 11 ಲಕ್ಷ ಪುಟಗಳಲ್ಲಿರುವ ದಾಖಲೆಗಳೊಂದಿಗೆ ಆತನನ್ನು ವಿಚಾರಣೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದರು.

‘ಕಸ್ಟಡಿಗೆ ತೆಗೆದುಕೊಳ್ಳುವಾಗ ಪೊಲೀಸರು ನನ್ನ ಕುಟುಂಬದ ಭೇಟಿಗೆ ಅವಕಾಶ ಕಲ್ಪಿಸುವುದಾಗಿ ಮೌಖಿಕವಾಗಿ ಭರವಸೆ ನೀಡಿದ್ದರು. ಆದರೆ, ಈಗ ಅವರು ಭೇಟಿಗೆ ಅವಕಾಶ ನೀಡುತ್ತಿಲ್ಲ’ ಎಂದು ಉಮರ್, ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

‘ಪೊಲೀಸ್ ಕಸ್ಟಡಿಯ ಅವಧಿ ದೀರ್ಘವಾಗಿರುವುದರಿಂದ ಪ್ರತಿದಿನ 30 ನಿಮಿಷಗಳ ಕಾಲ ಉಮರ್ ತನ್ನ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರನ್ನು ಭೇಟಿ ಮಾಡಲು ಅವಕಾಶ ನೀಡಬೇಕು’ ಎಂದೂ ಅರ್ಜಿಯಲ್ಲಿ ವಕೀಲರು ಕೋರಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖಾಧಿಕಾರಿಯು, ‘ನ್ಯಾಯಾಲಯದ ನಿರ್ದೇಶನದಂತೆ ಈಗಾಗಲೇ ಉಮರ್‌ಗೆ ಪ್ರತಿನಿತ್ಯ ತಮ್ಮ ವಕೀಲರೊಂದಿಗೆ ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಕೀಲರ ಮೂಲಕ ಉಮರ್ ತಮ್ಮ ಕುಟುಂಬದ ಸದಸ್ಯರಿಗೆ ಸಂದೇಶವನ್ನು ನೀಡಬಹುದು’ ಎಂದೂ ತನಿಖಾಧಿಕಾರಿ ಹೇಳಿದ್ದಾರೆ.

‘ಉಮರ್, ಕುಟುಂಬದ ಸದಸ್ಯರನ್ನು ಭೇಟಿ ಮಾಡಿದಲ್ಲಿ ತಮ್ಮ ದೀರ್ಘಕಾಲೀನ ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಇಲ್ಲವೇ ತನಿಖೆಗೆ ಅಡ್ಡಿಯಾಗುವ ಸಾಧ್ಯತೆಯೂ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.

TRENDING