Saturday, October 31, 2020
Home ದೊಡ್ಡಬಳ್ಳಾಪುರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

ದೊಡ್ಡಬಳ್ಳಾಪುರ: ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ತಾಲ್ಲೂಕಿನ ಎರಡು ಕೇಂದ್ರಗಳಲ್ಲಿ ಸೋಮವಾರ ನಡೆಯಿತು. ಮೊದಲ ದಿನದ ಗಣಿತ ವಿಷಯದ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ.

ಎರಡು ಪರೀಕ್ಷಾ ಕೇಂದ್ರಗಳಲ್ಲಿ 262 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಒಟ್ಟು 248 ವಿದ್ಯಾರ್ಥಿಗಳು ಹಾಜರಾಗಿದ್ದು, 14 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವುದನ್ನು ಪರಿಶೀಲಿಸಿ, ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನರ್‌ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣತೆ ತಪಾಸಣೆ ಮಾಡಲಾಯಿತು. ಸ್ಯಾನಿಟೈಸರ್ ಹಾಕಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿಯೂ ಸಾಕಷ್ಟು ಆಸನಗಳ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳು ಅಂತರ ಕಾಪಾಡಿಕೊಂಡು ಬರೆಯುವಂತೆ ವ್ಯವಸ್ಥೆ ಮಾಡಲಾಗಿತ್ತು.

ಕೋವಿಡ್-19 ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎರಡು ಕೊಠಡಿಗಳನ್ನು ಹಾಗೂ ಅಗತ್ಯ ಕೊಠಡಿ ಮೇಲ್ವಿಚಾರಕರನ್ನು ಮೀಸಲಿರಿಸಲಾಗಿತ್ತು. ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿತ್ತು.

ಪ್ರಥಮ ಪರೀಕ್ಷೆ ಪರಿಗಣನೆ: ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೋವಿಡ್-19 ಕಾರಣದಿಂದ ಅನಾರೋಗ್ಯದಿಂದ ಪರೀಕ್ಷೆ ಬರೆಯದೇ ಇದ್ದ ಒಬ್ಬ ವಿದ್ಯಾರ್ಥಿಯನ್ನು ಇಂದು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ, ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ತಿಳಿಸಿದ್ದಾರೆ.

TRENDING