Tuesday, December 1, 2020
Home ಸುದ್ದಿ ಜಾಲ ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸೇವೆ ಪುನರಾರಂಭ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸೇವೆ ಪುನರಾರಂಭ

ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಹುಬ್ಬಳ್ಳಿಯಿಂದ ತೆರಳುವ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಪ್ರಾರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ವಿಜಯಪುರ ಹಾಗೂ ಚಿಕ್ಕೋಡಿ ಮಾರ್ಗವಾಗಿ ಮಹಾರಾಷ್ಟ್ರದ ಪ್ರಮುಖ ಸ್ಥಳಗಳಾದ ಸೋಲಾಪುರ, ಬಾರ್ಶಿ, ಪಂಡರಾಪುರ, ಔರಂಗಾಬಾದ್, ಈಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ ಬಸ್ಸುಗಳ ಸಂಚಾರ ಆರಂಭಿಸಲಾಗಿದೆ. ನಿಪ್ಪಾಣಿಕೊಲ್ಲಾಪುರ ಮಾರ್ಗವಾಗಿ ಪುಣೆ, ಪಿಂಪ್ರಿ, ಮುಂಬೈ, ಬೊರಿವಿಲಿ, ಶಿರಡಿ ಮತ್ತಿತರ ಸ್ಥಳಗಳಿಗೆ ಶೀಘ್ರದಲ್ಲಿ ಬಸ್ ಸೇವೆ ಪ್ರಾರಂಭಿಸಲಾಗುತ್ತದೆ ಎಂದು ವಾ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ 2 ವೋಲ್ವೋ, 4 ಎಸಿ ಸ್ಲೀಪರ್, 1 ರಾಜಹಂಸ ಹಾಗೂ 14 ವೇಗದೂತ ಸಾರಿಗೆಗಳು ಸೇರಿದಂತೆ ಒಟ್ಟು 21 ಬಸ್ಸುಗಳು ಮಹಾರಾಷ್ಟ್ರ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಇವುಗಳೊಂದಿಗೆ ಹೊರ ಜಿಲ್ಲೆಗಳಿಂದ ಹುಬ್ಬಳ್ಳಿಯ ಮಾರ್ಗವಾಗಿ ನಿತ್ಯ 57 ಬಸ್ಸುಗಳು ಮಹಾರಾಷ್ಟ್ರ ರಾಜ್ಯಕ್ಕೆ ಸಂಚರಿಸುತ್ತಿದ್ದವು.

‘ಛೋಟಾ ಮುಂಬೈ’ ಖ್ಯಾತಿಯ ಹುಬ್ಬಳ್ಳಿಗರಿಗೂ ಮಹಾರಾಷ್ಟ್ರಕ್ಕೂ ಅವಿನಾಭಾವ ಸಂಬಂಧವಿದೆ.ಮುಂಬೈ, ಶಿರಡಿ, ಪಿಂಪ್ರಿ, ಪುಣೆ, ಬೊರಿವಿಲಿ, ಈಚಲಕರಂಜಿ, ಔರಂಗಾಬಾದ್, ಮೀರಜ್, ಸೋಲಾಪುರ, ಬಾರ್ಶಿ, ಪಂಡರಾಪುರ ಮತ್ತಿತರ ಸ್ಥಳಗಳಲ್ಲಿ ಬಹಳಷ್ಟು ಕನ್ನಡಿಗರಿದ್ದಾರೆ. ಈ ಸ್ಥಳಗಳ ನಡುವೆ ಸಂಚರಿಸುವ ಬಸ್ಸುಗಳು ಬರೀ ಸಾರಿಗೆ ಸಂಚಾರಕ್ಕಷ್ಟೇ ಸೀಮಿತವಾಗದೆ ಉಭಯ ರಾಜ್ಯಗಳ ಹಲವಾರು ಜನರ ಶಿಕ್ಷಣ, ಉದ್ಯೋಗ, ವಾಣಿಜ್ಯ, ಕೌಟುಂಬಿಕ ಹಾಗೂ ಭಾವನಾತ್ಮಕ ಸಂಬಂಧಗಳ ಸಂಪರ್ಕ ಸೇತುವಾಗಿವೆ. ಹುಬ್ಬಳ್ಳಿಯಿಂದ ವಿವಿಧ ಸ್ಥಳಗಳಿಗೆ ಹೋಗುವ ಬಸ್ಸುಗಳ ಸಮಯ ಹಾಗೂ ಮಾರ್ಗದ ವಿವರವನ್ನು ಈಗಾಗಲೇ ಪ್ರಯಾಣಿಕರಿಗೆ ಒದಗಿಸಲಾಗುತ್ತಿದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುತ್ತದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

TRENDING