Tuesday, October 27, 2020
Home ಅಂತರ್ ರಾಜ್ಯ ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಕಳೆದ 2 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕಟ್ಟಡದೊಳಗೆ ಇನ್ನೂ ಕೆಲವರು ಸಿಲುಕಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.

ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿದು 2 ದಿನಗಳೇ ಕಳೆದಿವೆ. ಆದರೂ ಕಟ್ಟಡದ ಅವಶೇಷಗಳಡಿ ಸಿಲುಕಿದವರೆಲ್ಲರ ಮೃತದೇಹಗಳನ್ನು ಹೊರಗೆಳೆಯಲು ಸಾಧ್ಯವಾಗಿಲ್ಲ. ಇಂದು ಬೆಳಗ್ಗಿನವರೆಗೆ ಒಟ್ಟು 33 ಜನರ ಶವಗಳನ್ನು ಹೊರಗೆಳೆಯಲಾಗಿದೆ. ನಿನ್ನೆ ರಾತ್ರಿ ವೇಳೆ ಎನ್​ಡಿಆರ್​ಎಫ್ ಸಿಬ್ಬಂದಿ 10ಕ್ಕೂ ಹೆಚ್ಚು ಶವಗಳನ್ನು ಹೊರಗೆ ತೆಗೆದಿದ್ದಾರೆ. ಅಚ್ಚರಿಯ ರೀತಿಯಲ್ಲಿ ಐವರನ್ನು ಜೀವಂತವಾಗಿ ಹೊರಗೆ ಕರೆತರಲಾಗಿದೆ. ಮೃತಪಟ್ಟವರಲ್ಲಿ 2ರಿಂದ 15 ವರ್ಷದೊಳಗಿನ 11 ಮಕ್ಕಳು ಕೂಡ ಸೇರಿದ್ದಾರೆ.

ಸೋಮವಾರ ಮುಂಜಾನೆ 3.40ರ ವೇಳೆಗೆ ಈ ದುರಂತ ಸಂಭವಿಸಿತ್ತು. ಘಟನೆ ನಡೆದ ದಿನ ಸಂಜೆಯೊಳಗೆ 20- 25 ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿತ್ತು. ಉಳಿದವರು ಅವಶೇಷಗಳಡಿ ಸಿಲುಕಿದ್ದರು ಎಂದು ಎನ್​ಡಿಆರ್​ಎಫ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತಪಟ್ಟವರಲ್ಲಿ 2 ವರ್ಷದ ಮಗು ಕೂಡ ಇತ್ತು. ನಿನ್ನೆ ಸಂಜೆಯ ನಂತರ 10ಕ್ಕೂ ಹೆಚ್ಚು ಜನರ ಶವಗಳನ್ನು ಹೊರಗೆ ತೆಗೆಯುವ ಮೂಲಕ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

TRENDING