Saturday, October 24, 2020
Home ರಾಜ್ಯ ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪಿಎಂಗೆ ಸಿಎಂ ಯಡಿಯೂರಪ್ಪ ಮಾಹಿತಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪಿಎಂಗೆ ಸಿಎಂ ಯಡಿಯೂರಪ್ಪ ಮಾಹಿತಿ

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಕೋವಿಡ್ 19 ನಿಯಂತ್ರಣ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಈ ವೇಳೆ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದ ಯಡಿಯೂರಪ್ಪ ಅವರು, ರಾಜ್ಯದಲ್ಲಿ 136 ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಿದ್ದು, ಪ್ರತೀನಿತ್ಯ ಸುಮಾರು 70,000 ಸ್ಯಾಂಪಲ್ಸ್ ಗಳ ಪರೀಕ್ಷೆ ನಡೆಸಲಾಗುತ್ತಿದೆ. ಈವರೆಗೂ ರಾಜ್ಯದಲ್ಲಿ ಸುಮಾರು 43 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ವೈದ್ಯಕೀಯ ವರದಿ ಬರುತ್ತಿದ್ದಂತೆಯೇ ರೋಗಲಕ್ಷಣ ಇರುವ ಸೋಂಕಿತರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತದೆ ಮತ್ತು ಸಂಪರ್ಕ ಹೊಂದಿರುವವರನ್ನು 24 ರಿಂದ 48 ಗಂಟೆಗಳಲ್ಲಿ ಗುರುತಿಸಿ ಮತ್ತು ಅವರನ್ನು ಸಂಪರ್ಕಿಸುವ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕದೊಂದಿಗೆ ಇರುವ ಹಾಸಿಗೆಗಳ ಸಂಖ್ಯೆಯನ್ನು 7,000 ದಿಂದ 18,000 ಕ್ಕೆ ಹೆಚ್ಚಿಸಲಾಗಿದ್ದು, ಇದನ್ನು ಮತ್ತಷ್ಟು 31,000 ಕ್ಕೆ ಹೆಚ್ಚಿಸಲಾಗುವುದು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3,000ಕ್ಕೂ ಹೆಚ್ಚು ಐಸಿಯು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸಲಾಗಿದೆ.

ಪ್ರಮಾಣಿತ ಚಿಕಿತ್ಸೆಯ ಹೊರತಾಗಿ, ‘ರೋಗಿಗಳಿಗೆ ರೆಮ್‌ಡೆಸಿವಿರ್ ಸೇರಿದಂತೆ’ ಇತರೆ ಔಷಧಿಗಳನ್ನು ‘ಉಚಿತವಾಗಿ ನೀಡಲಾಗುತ್ತಿದೆ. ರಾಜ್ಯದಲ್ಲಿ 2,000 ಆಂಬುಲೆನ್ಸ್‌ಗಳೂ ಕೂಡ ಲಭ್ಯವಿದೆ ಎಂದು ತಿಳಿಸಿದ್ದಾರೆ.

TRENDING