Wednesday, October 21, 2020
Home ಬೆಂಗಳೂರು ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ: ಸಚಿವ ಬಸವರಾಜ ಬೊಮ್ಮಾಯಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ: ಸಚಿವ ಬಸವರಾಜ ಬೊಮ್ಮಾಯಿ

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಪೊಲೀಸ್‌ ಇಲಾಖೆಯ ವಿವಿಧ ವಿಭಾಗಗಳಲ್ಲಿ 2,094 ಸಬ್‌ ಇನ್‌ಸ್ಪೆಕ್ಟರ್‌, 1,024 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌, 1,525 ಹೆಡ್‌ ಕಾನ್‌ಸ್ಟೆಬಲ್‌ ಮತ್ತು 15,560 ಕಾನ್‌ಸ್ಟೆಬಲ್‌ಗಳ ಹುದ್ದೆಗಳು ಖಾಲಿ ಇವೆ’ ಎಂದು ಮಾಹಿತಿ ನೀಡಿದ್ದಾರೆ.

247 ಜನರಿಗೆ ಭದ್ರತೆ: ಕಾಂಗ್ರೆಸ್‌ ಸದಸ್ಯ ಆರ್‌. ಧರ್ಮಸೇನ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಗೃಹ ಸಚಿವರು, ‘ಮಾಜಿ ಶಾಸಕರು, ಮಾಜಿ ಸಂಸದರು ಸೇರಿದಂತೆ ರಾಜ್ಯದ 247 ಗಣ್ಯ ವ್ಯಕ್ತಿಗಳಿಗೆ ಸ್ಥಳೀಯ ಪರಿಸ್ಥಿತಿ ಹಾಗೂ ಜೀವ ಬೆದರಿಕೆ ಆಧಾರದಲ್ಲಿ ಭದ್ರತೆ ಒದಗಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮೂರು ವರ್ಷದಲ್ಲಿ 1.17 ಲಕ್ಷ ಕೋಟಿ ಸಾಲ: 2017-18ರಿಂದ 2019-20ರ ಅವಧಿಯಲ್ಲಿ ರಾಜ್ಯ ಸರ್ಕಾರ ವಿವಿಧ ಮೂಲಗಳಿಂದ ₹ 1,17,494.93 ಕೋಟಿ ಸಾಲ ಪಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯ ಆರ್‌. ಧರ್ಮಸೇನ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘2017-18ರಲ್ಲಿ ₹ 25,121.86 ಕೋಟಿ, 2018-19ರಲ್ಲಿ ₹ 41,94.06 ಕೋಟಿ ಮತ್ತು 2019-20ರಲ್ಲಿ ₹ 50,459.01 ಕೋಟಿ ಸಾಲ ಪಡೆಯಲಾಗಿದೆ’ ಎಂದುವಿವರಿಸಿದರು.

ಜೆಡಿಎಸ್‌ ಸದಸ್ಯ ಎನ್‌. ಅಪ್ಪಾಜಿಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘ರಾಜ್ಯ ಸರ್ಕಾರವು 2019-20ರಲ್ಲಿ ರಿಸರ್ವ್‌ ಬ್ಯಾಂಕ್‌ನಿಂದ ₹ 48,499.38 ಕೋಟಿ ಮತ್ತು ನಬಾರ್ಡ್‌ನಿಂದ ₹ 973.89 ಕೋಟಿ ಸಾಲ ಪಡೆದಿದೆ. 2020-21ರಲ್ಲಿ ರಿಸರ್ವ್‌ ಬ್ಯಾಂಕ್‌ನಿಂದ ₹ 12,000 ಕೋಟಿ ಮತ್ತು ನಬಾರ್ಡ್‌ನಿಂದ ₹ 52.29 ಕೋಟಿ ಸಾಲ ಪಡೆದಿದೆ’ ಎಂದು ತಿಳಿಸಿದ್ದಾರೆ.

TRENDING