Saturday, October 24, 2020
Home ರಾಜ್ಯ ಕೋವಿಡ್ 19 ಪರಿಹಾರ ಧನ : ಚಾಲಕರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಸಿಹಿಸುದ್ದಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಸರಕಾರವು 4,008 ಕೋ. ರೂ. ಪೂರಕ ಅಂದಾಜುಗಳ 2020ನೇ ಸಾಲಿನ ಕರ್ನಾಟಕ ಧನ ವಿನಿಯೋಗ ಮಸೂದೆಗೆ ಸದನದ ಒಪ್ಪಿಗೆ ಪಡೆಯುವ ಸಂದರ್ಭದಲ್ಲಿ ಈ ಭರವಸೆ ನೀಡಿದೆ.

ಗುರುವಾರ ಭೋಜನ ಬಳಿಕದ ಕಲಾಪದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರವಾಗಿ ಮಸೂದೆಯನ್ನು ಪರ್ಯಾಲೋಚಿಸಿದ ಸಚಿವ ಜೆ. ಸಿ. ಮಾಧುಸ್ವಾಮಿಯವರು, ಪೂರಕ ಅಂದಾಜು ಬಗ್ಗೆ ವಿವರ ನೀಡಿದರು.

ಆಗ ಸಿದ್ದರಾಮಯ್ಯ ಅವರು, ರಾಜ್ಯದ 7.50 ಲಕ್ಷ ಚಾಲಕರಿಗೆ ತಲಾ 5,000 ರೂ. ಪರಿಹಾರವನ್ನು ಸರಕಾರ ಘೋಷಿಸಿತ್ತು. ಆದರೆ ಈವರೆಗೆ ಎರಡೂವರೆ ಲಕ್ಷ ಚಾಲಕರಿಗಷ್ಟೇ ಪರಿಹಾರ ಸಿಕ್ಕಿದೆ. ಸಂಕಷ್ಟದಿಂದ ಸಾಕಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ರೀತಿ ಸವಿತಾ ಸಮಾಜ, ಮಡಿವಾಳರಿಗೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ದೊರಕಿಲ್ಲ ಎಂದರು.

ಬ್ಯಾಡ್ಜ್ ಸಮಸ್ಯೆ: ಭಟ್
ಬಿಜೆಪಿಯ ಶಾಸಕ ರಘುಪತಿ ಭಟ್‌ ಅವರು ಪ್ರತಿಕ್ರಿಯಿಸಿ, ಬಹಳಷ್ಟು ಚಾಲಕರಲ್ಲಿ ಬ್ಯಾಡ್ಜ್ ಇಲ್ಲ. ಆದರೆ ಬ್ಯಾಡ್ಜ್ ಕಡ್ಡಾಯ ಮಾಡಲಾಗಿದೆ. ಇನ್ನೊಂದೆಡೆ ಮಾಲಕರಾಗಿರುವ ಚಾಲಕರು ಅರ್ಜಿ ಸಲ್ಲಿಸಿದರೆ ಆನ್‌ಲೈನ್‌ನಲ್ಲಿ ಸ್ವೀಕರಿಸುತ್ತಿಲ್ಲ. ಈ ಸಮಸ್ಯೆ ನಿವಾರಿಸಿದರೆ ಚಾಲಕರು ನೆರವು ಪಡೆಯಬಹುದು ಎಂದು ಸಲಹೆ ನೀಡಿದರು.

ಬಳಿಕ ಜೆ.ಸಿ. ಮಾಧುಸ್ವಾಮಿ ಅವರು, ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಅರ್ಹ ಚಾಲಕರಿಗೆ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಮಸೂದೆಗೆ ಅನುಮೋದನೆ ನೀಡಲಾಯಿತು.

TRENDING