Saturday, October 24, 2020
Home ರಾಜಕೀಯ ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರ!

ಇದೀಗ ಬಂದ ಸುದ್ದಿ

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರ!

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು ಸುದೀರ್ಘ ಚರ್ಚೆ ವಿಧೇಯಕದ ಮೇಲೆ ನಡೆಯಿತು. ಒಂದಿಷ್ಟು ತಿದ್ದುಪಡಿಗಳಿಗೆ ಸರ್ಕಾರ ಒಪ್ಪಿದ್ದು ವಿಶೇಷ.

ವಿಧೇಯಕದ ಪ್ರಕಾರ ಇನ್ನುಮುಂದೆ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು. ಇಲ್ಲಿಯವರೆಗೆ ಕೃಷಿಕರು ಮಾತ್ರ ಕೃಷಿ ಜಮೀನು ಖರೀದಿ ಮಾಡಲು ಅವಕಾಶವಿತ್ತು. ಕೃಷಿಯೇತರರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕೊಡುವುದರಿಂದ ಕೆಟ್ಟ ಪರಿಣಾಮಗಳಾಗುತ್ತವೆ ಎಂಬುದು ಸೇರಿದಂತೆ ಹಲವು ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು.

ಈ ಹೊಸ ತಿದ್ದುಪಡಿಯಲ್ಲಿ ನೀರಾವರಿ ಪ್ರದೇಶದಲ್ಲಿ ಖರೀದಿ ಮಾಡುವ ಜಮೀನು ಕೃಷಿಗೆ ಮಾತ್ರ ಬಳಕೆಯಾಗಬೇಕು ಎಂಬುದನ್ನು ಸೇರಿಸಲಾಗಿದೆ. ಜೊತೆಗೆ 5 ಜನರಿರುವ ಒಂದು ಕುಟುಂಬ ಗರಿಷ್ಠ 54 ಎಕರೆ ಕೃಷಿ ಜಮೀನು ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. 5ಕ್ಕಿಂತ ಹೆಚ್ಚು ಇರುವ ಕುಟುಂಬ ಗರಿಷ್ಠ 108 ಎಕರೆ ಜಮೀನು ಖರೀದಿ ಮಾಡಬಹುದು. ಕೃಷಿ ಜಮೀನು ಖರೀದಿಸಲು ಈ ಹಿಂದೆ ಇದ್ದ 25 ಲಕ್ಷ ರೂ ವಾರ್ಷಿಕ ಆದಾಯ ಮಿತಿ ರದ್ದು ಮಾಡಿರುವುದಕ್ಕೂ ರೈತ ಸಂಘಟನೆಗಳು ಹಾಗೂ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು.

ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕದ ಕುರಿತು ಚರ್ಚೆ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರು ವಿಧೇಯಕವನ್ನು ಸಮರ್ಥಿಸಿಕೊಂಡರು. ಭೂಕಂದಾಯ ಕಾಯ್ದೆ 79 ಎ ತಿದ್ದುಪಡಿ ಮಾಡಲು ಪ್ರೊ. ನಂಜುಂಡಸ್ವಾಮಿ ಅವರೇ ಹೇಳಿದ್ದರು. ಹಿಂದೆ ವಿಧಾನಸಭೆ ಕಲಾಪದಲ್ಲೇ ರೈತ ನಾಯಕ ನಂಜುಂಡಸ್ವಾಮಿ ಕಾಯ್ದೆ ಬದಲಾವಣೆಗೆ ಒತ್ತಾಯಿಸಿದ್ದರು. ಈಗ ಕಾಂಗ್ರೆಸ್ ನಲ್ಲಿರುವ ಆರ್ ವಿ ದೇಶಪಾಂಡೆ ಅವರೂ ಕಾಯ್ದೆ ಬದಲಾವಣೆಗೆ ಒತ್ತಾಯ ಮಾಡಿದ್ದರು. ಕಾಯ್ದೆ ಬದಲಾವಣೆಗೆ ಕಾಂಗ್ರೆಸ್ ನಾಯಕರೇ ಒತ್ತಾಯ ಮಾಡಿ ಈಗ ಉಲ್ಟಾ ಮಾತಾಡ್ತಿದ್ದಾರೆ. ಈಗ ಕಾಂಗ್ರೆಸ್ ಅಧ್ಯಕ್ಷರಾಗಿರುವವರು ಈ ಹಿಂದೆ ಕಾಯ್ದೆ ಬದಲಾವಣೆ ಮಾಡಲು ಒತ್ತಾಯ ಮಾಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮೇಲೆ ಅಶೋಕ್ ವಾಗ್ದಾಳಿ ಮಾಡಿದರು.

ಕನಕಪುರ ರಸ್ತೆಯಲ್ಲಿ ರವಿಶಂಕರ್ ಗುರೂಜಿಯವರು ಜಮೀನು ಪಡೆಯಲು ಸಾಧ್ಯವಾಗಲಿಲ್ಲ. ತಮ್ಮ ಸಿಬ್ಬಂದಿಯ ಮೂಲಕ ಜಮೀನು ಖರೀದಿಸಬೇಕಾಯ್ತು ಅಂತ ಹೇಳಿದ್ದರು. ಪರೋಕ್ಷವಾಗಿ ಕಾಯ್ದೆ ಬಗ್ಗೆ ಬದಲಾವಣೆ ಮಾಡಲು ಒತ್ತಾಯಿಸಿದ್ದರು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್. ಅಶೋಕ್ ಅವರು ವಾಗ್ದಾಳಿ ಮಾಡಿದರು.

ಕಾಂಗ್ರೆಸ್ ಪಕ್ಷದ ಬಹಳ ಜನರು ಈ ವಿಧೇಯಕ ತರಲು ಸಲಹೆ ಕೊಟ್ಟಿದ್ದಾರೆ. ಕಾಂಗ್ರೆಸ್ ನಲ್ಲಿ ಅತಿರಥ ಮಹಾನಾಯಕರೂ ಇದ್ದಾರೆ. ನಮ್ಮಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತ್ರ ಅತಿರಥರು. ಹಿಂದೆ ಕಾಂಗ್ರೆಸ್ ಸರಕಾರದಲ್ಲೇ ಈ ಕಾಯ್ದೆ ಬದಲಾವಣೆಗೆ ಪ್ರಯತ್ನ ನಡೆದಿತ್ತು. ಭೂಕಂದಾಯ ಕಾಯ್ದೆ 79 ಎ ಮತ್ತು ಬಿ ಬದಲಾವಣೆ ಅಗತ್ಯವಾಗಿದೆ ಎಂದು ಆರ್ ಅಶೋಕ್ ಅವರು ಸದನಕ್ಕೆ ವಿವರಿಸಿದರು.

TRENDING