Saturday, October 24, 2020
Home ಬೆಂಗಳೂರು ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?; ಇಲ್ಲಿದೆ ವಿವರ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?; ಇಲ್ಲಿದೆ ವಿವರ

ಬೆಂಗಳೂರು (ಸೆ. 27): ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಹೀಗಾಗಿ, ನಾಳೆ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಹಾಗಿದ್ದರೆ, ಸೇವೆಗಳು ಯಾವವು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. ನಾಳೆ ರೈತರು ಹಾಗೂ ಕೆಲ ಸಂಘಟನೆಗಳು ಪ್ರತಿಭಟನೆ ಮಾಡುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡುವ ಸಾಧ್ಯತೆ ಇದೆ. ಟೌನ್ ಹಾಲ್, ರೈಲ್ವೆ ಸ್ಟೇಷನ್, ಮೆಜೆಸ್ಟಿಕ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ಬಳಿ ಪ್ರಮುಖವಾಗಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲು ನಿರ್ಧರಿಸಲಾಗಿದೆ. ಪ್ರತಿಭಟನೆ ತೀವ್ರತೆ ನೋಡಿಕೊಂಡು ಭದ್ರತೆ ಹೆಚ್ಚಿಸಲು ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆರಾಜ್ಯದ ವಿವಿಧ ಕಡೆಗಳಲ್ಲೂ ಪ್ರತಿಭಟನೆ ನಡೆಯಲಿದೆ.

ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ರಸ್ತೆ ಕೆಲಕಾಲ ಬಂದ್ ಆಗುವ ಸಾಧ್ಯತೆ ಇದೆ. ಕರವೇ ಕಾರ್ಯಕರ್ತರಿಂದ ರ್ಯಾಲಿ ನಡೆಯಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಯೋಜಿಸಲಾಗಿದೆ. ಇನ್ನು, ಎಂದಿನಂತೆ ಸರ್ಕಾರಿ ಸ್ವಾಮ್ಯದ ವಾಹನಗಳು ಓಡಾಡಲಿವೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ. ಈಗಾಗಲೇ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಅಂಗಡಿ ಮುಂಗಟ್ಟುಗಳು, ಮಾಲ್​ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್​ಗೆ ಬೆಂಬಲ ಸೂಚಿಸಿದ್ದು, ಇವು ಸಂಪೂರ್ಣ ಸ್ತಬ್ಧವಾಗಲಿದೆ. ಹೋಟೆಲ್​ಗಳು ನೈತಿಕ ಬೆಂಬಕ ಮಾತ್ರ ಇರುವುದರಿಂದ ಅವು ತೆರೆದಿರಲಿವೆ.

ಉಳಿದಂತೆ ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.

ಏನಿರುತ್ತೆ?:

ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.
ಏನಿರಲ್ಲ?:
ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ. ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ, ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ ಮಾಡಲು ನಿರ್ಧರಿಸಲಾಗಿದೆ.  

TRENDING