Saturday, October 24, 2020
Home ಬೆಂಗಳೂರು ಪ್ರಾಮಾಣಿಕತೆ ಸಾಬೀತು ಪಡಿಸಲು ಡಿಕೆಶಿಗೆ ಸಿಕ್ಕಿರುವ ಅತ್ಯುತ್ತಮ ಅವಕಾಶ: ಡಾ.ಸುಧಾಕರ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಪ್ರಾಮಾಣಿಕತೆ ಸಾಬೀತು ಪಡಿಸಲು ಡಿಕೆಶಿಗೆ ಸಿಕ್ಕಿರುವ ಅತ್ಯುತ್ತಮ ಅವಕಾಶ: ಡಾ.ಸುಧಾಕರ್

ಮೈಸೂರುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ನಿವಾಸದ ಮೇಲೆ ಈ ಹಿಂದೆ ಇಡಿ, ಐಟಿ ದಾಳಿ ನಡೆದಿದ್ದು, ತನಿಖೆಯ ಮುಂದುವರಿದ ಭಾಗವಾಗಿ ಈಗ ಸಿಬಿಐ ದಾಳಿ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೋಮವಾರ ಇಲ್ಲಿ ತಿಳಿಸಿದರು.

ರಾಜಕೀಯ ಪ್ರೇರಿತ ದಾಳಿ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿ, ‘ರಾಜಕಾರಣಕ್ಕೂ ದಾಳಿಗೂ ಸಂಬಂಧ ಇಲ್ಲ. ರಾಜಕೀಯ ಹಸ್ತಕ್ಷೇಪದಲ್ಲಿ ಬಿಜೆಪಿ ನಂಬಿಕೆ ಇಟ್ಟುಕೊಂಡಿಲ್ಲ’ ಎಂದರು.

‘ಪಾರದರ್ಶಕವಾಗಿ ತನಿಖೆ ನಡೆಯಲಿದೆ. ತಮ್ಮ ಪ್ರಾಮಾಣಿಕತೆಯನ್ನು ಸಾಬೀತುಪಡಿಸಲು ಶಿವಕುಮಾರ್ ಅವರಿಗೆ ಸಿಕ್ಕಿರುವ ಅತ್ಯುತ್ತಮ ಅವಕಾಶ’ ಎಂದು ಹೇಳಿದರು.

ಸೋತರೂ ಸರ್ಕಾರ ಬಿದ್ದು ಹೋಗಲ್ಲ: ‘ಬಿಜೆಪಿ, 117 ಸ್ಥಾನಗಳನ್ನು ಸ್ವಂತ ಬಲದಿಂದ ಗೆದ್ದಿದೆ. ಮುಂದಿನ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗಳಲ್ಲಿ ಬಿಜೆಪಿ ಸೋತರೂ ಸರ್ಕಾರ ಬಿದ್ದು ಹೋಗುವುದಿಲ್ಲ. ಹೀಗಾಗಿ, ಉಪಚುನಾವಣೆಗೂ ಸಿಬಿಐ ದಾಳಿಗೂ ಸಂಬಂಧವಿಲ್ಲ. ಸಿಬಿಐ ಸ್ವಾಯತ್ತ
ಸಂಸ್ಥೆ. ರಾಜಕೀಯ ಬಣ್ಣ ಹಚ್ಚಿ ಜನರ ದಿಕ್ಕು ತಪ್ಪಿ ಸುವ ಕೆಲಸ ಮಾಡಬಾರದು. ಕಾಂಗ್ರೆಸ್‌ ಸುಮ್ಮನೇ ಆರೋಪ ಮಾಡುತ್ತಿದೆ’ ಎಂದು ಡಾ.ಸುಧಾಕರ್‌ ತಿಳಿಸಿದರು.

‘ಡಿ.ಕೆ. ಶಿವಕುಮಾರ್ ಅವ ರನ್ನು ಟಾರ್ಗೆಟ್ ಮಾಡಿದ್ದೇವೆ ಎನ್ನುವುದಾ ದರೆ, ಯುಪಿಎ ಸರ್ಕಾರದ ಅವಧಿಯಲ್ಲಿ, ಅಮಿತ್ ಶಾ ಅವರನ್ನು ಎರಡು ವರ್ಷ ಗುಜರಾತ್‍ನಿಂದ ಬಹಿಷ್ಕಾರ ಮಾಡಿದ್ದು, ಈಗಿನ ಆಂಧ್ರಪ್ರದೇಶದ ಸಿಎಂ ಸೇರಿ ಕಾಂಗ್ರೆಸ್ಸೇತರ ಪಕ್ಷದ ಮೇಲೆ ಸಿಬಿಐ ದಾಳಿ ನಡೆಸಿದ್ದು ರಾಜಕೀಯ ಪ್ರೇರಣೆಯೇ?’ ಎಂದು ಪ್ರಶ್ನಿಸಿದರು.

TRENDING