Tuesday, October 27, 2020
Home ಜಿಲ್ಲೆ ಬೆಂಗಳೂರು ಡಿ.ಕೆ. ರವಿಯಿಂದ ಡಿಕೆಶಿಗೆ ದುರಾದೃಷ್ಟ ವರ್ಗಾವಣೆ ಎಂದ ಪ್ರಶಾಂತ್ ಸಂಬರಗಿಗೆ ಕುಸುಮಾ ತಿರುಗೇಟು..!

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಡಿ.ಕೆ. ರವಿಯಿಂದ ಡಿಕೆಶಿಗೆ ದುರಾದೃಷ್ಟ ವರ್ಗಾವಣೆ ಎಂದ ಪ್ರಶಾಂತ್ ಸಂಬರಗಿಗೆ ಕುಸುಮಾ ತಿರುಗೇಟು..!

 ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಅವರಿಗೆ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಫೇಸ್​ಬುಕ್​ ಮೂಲಕವೇ ತಿರುಗೇಟ್​ ನೀಡಿದ್ದಾರೆ.

ಕುಸುಮಾ ಅವರ ದುರಾದೃಷ್ಠ ಡಿ.ಕೆ. ರವಿ ಅವರಿಂದ ಡಿ.ಕೆ. ಶಿವಕುಮಾರ್​ ಅವರಿಗೆ ವರ್ಗಾವಣೆಗೊಳ್ಳುತ್ತಿದೆ. ಕುಸುಮಾ ಜಿಂದಾಬಾದ್​ ಎಂದು ಪ್ರಶಾಂತ್​ ಸಂಬರಗಿ ನಿನ್ನೆಯಷ್ಟೇ ತಮ್ಮ ಫೇಸ್​ಬುಕ್​ನಲ್ಲಿ ಕುಸುಮಾ ಕಾಂಗ್ರೆಸ್​ ಸೇರ್ಪಡೆಗೊಳ್ಳುತ್ತಿರುವ ಫೋಟೋ ಹಾಕಿ ಬರೆದುಕೊಂಡಿದ್ದಾರೆ. ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಪ್ರಶಾಂತ್​ ಈ ಪೋಸ್ಟ್​ ಮಾಡಿದ್ದಾರೆನ್ನಲಾಗಿದೆ.

ಇದೇ ಬೆನ್ನಲ್ಲೇ ಕುಸುಮಾ ಅವರು ಫೇಸ್​ಬುಕ್​ ಮೂಲಕವೇ ಪ್ರಶಾಂತ್​ ಸಂಬರಗಿಗೆ ನಯವಾಗಿಯೇ ತಿರುಗೇಟು ನೀಡಿದ್ದಾರೆ. ಸಹೋದರ ಪ್ರಶಾಂತ್ ಸಂಬರಗಿಯವರಿಗೆ ಎಂದು ಹೆಸರು ನಮೂದಿಸಿ ವಿಷಯ ಆರಂಭಿಸಿರುವ ಕುಸುಮಾ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ಧ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ಧ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಮುಂದುವರಿದು ಟೀಕಾ ಪ್ರಹಾರ ಆರಂಭಿಸಿರುವ ಕುಸುಮಾ, ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ. ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ. ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ? ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಅದೃಷ್ಟ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹಾಥರಸ್​ನ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ಧಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ನಯವಾಗಿಯೇ ತಿರುಗೇಟು ನೀಡಿದ್ದಾರೆ.

TRENDING