Monday, October 19, 2020
Home ಅಂತರ್ ರಾಜ್ಯ ಯು.ಪಿ, ಬಿಹಾರದಂತೆ 'ಮಾಫಿಯಾ ರಾಜ್'‌ ಅಗುತ್ತಿದೆ ಪಶ್ಚಿಮ ಬಂಗಾಳ: ದಿಲೀಪ್ ಘೋಷ್

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಯು.ಪಿ, ಬಿಹಾರದಂತೆ ‘ಮಾಫಿಯಾ ರಾಜ್’‌ ಅಗುತ್ತಿದೆ ಪಶ್ಚಿಮ ಬಂಗಾಳ: ದಿಲೀಪ್ ಘೋಷ್

 ಕೊಲ್ಕತ್ತಾಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ ಎರಡು ರಾಜ್ಯಗಳಲ್ಲಿ ಮಾಫಿಯಾ-ರಾಜ್‌ ಅಸ್ತಿತ್ವದಲ್ಲಿದೆ ಎಂದು ಬಿಜೆಪಿ ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿದೆ.

‘ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್‌ ವ್ಯವಸ್ಥೆಗೆ ಜಾರುತ್ತಿದೆ. ಪೊಲೀಸ್ ಠಾಣೆಯ ಮುಂದೆ ಕೌನ್ಸಿಲರ್‌ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ’ ಎಂದು ಘೋಷ್‌ ಹೇಳಿದರು.

24 ಪರಗಣ ಜಿಲ್ಲೆಯ ತಿತಾಗರ್‌ನಲ್ಲಿ ಪೊಲೀಸ್‌ ಠಾಣೆಯ ಎದುರೇ ಬಿಜೆಪಿ ನಾಯಕ ಮನೀಷ್‌ ಶುಕ್ಲಾ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಘೋಷ್‌, ಪಶ್ಚಿಮ ಬಂಗಾಳವು ಮಾಫಿಯಾ ರಾಜ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ‘ಇಂತಹ ಅರಾಜಕ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಾಧ್ಯವೇ’ ಎಂದು ಘೋಷ್ ಪ್ರಶ್ನೆ ಮಾಡಿದ್ದಾರೆ.

‘ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ 120 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ,’ ಎಂದು ಅವರು ಹೇಳಿದರು.

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಘೋಷ್ ಅವರ ಟೀಕೆಗಳನ್ನು ವ್ಯಂಗ್ಯವಾಡಿದ ಟಿಎಂಸಿ

‘ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಾಫಿಯಾ-ರಾಜ್ ಅಸ್ತಿತ್ವದಲ್ಲಿದೆ ಎಂದು ಘೋಷ್‌ ಅವರು ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ’ ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.

TRENDING