Thursday, October 22, 2020
Home ಸುದ್ದಿ ಜಾಲ ಹುಂಡಿ ಕಾಣಿಕೆಯಲ್ಲಿ ಹೊಸ ದಾಖಲೆ ಬರೆದ ತಿರುಪತಿ..!

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಹುಂಡಿ ಕಾಣಿಕೆಯಲ್ಲಿ ಹೊಸ ದಾಖಲೆ ಬರೆದ ತಿರುಪತಿ..!

ತಿರುಪತಿ : ವಿಶ್ವ ಪ್ರಸಿದ್ದ ತಿರುಪತಿ ಶ್ರೀ ವೆಂಕಟೇಶ್ವರನಿಗೆ ಅಪಾರ ಸಂಖ್ಯೆಯ ಭಕ್ತರು ಇದ್ದಾರೆ. ದೇಶ ಮಾತ್ರವಲ್ಲದೇ ವಿದೇಶಗಳಿಂದಲೂ ಸಹ ತಿಮ್ಮಪ್ಪನ ದರ್ಶನ ಪಡೆಯಲು ಆಗಮಿಸುತ್ತಾರೆ. ಈ ಬಾರಿ ಮಾತ್ರ ಕೊರೋನಾ ಮಾಹಾ ಮಾರಿಯಿಂದಾಗಿ ಕೆಲ ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು. ಕೆಲವು ಮುಂಜಾಗ್ರತಾ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಮತ್ತೆ ದೇವಾಲಯವನ್ನು ತೆರೆಯಲಾಗಿದ್ದು, ಭಾರೀ ಪ್ರಮಾಣದ ಭಕ್ತರು ಆಗಮಿಸಿ ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ತಿರುಪತಿ ವೆಂಕಟೇಶ್ವರ ದೇವಾಲಯ ಹುಂಡಿ ಕಾಣಿಕೆ ಸಂಗ್ರಹದಲ್ಲಿ ಹೊಸ ದಾಖಲೆ ಬರೆದಿದೆ. ಹೌದು, ಅಕ್ಟೋಬರ್ 2ರಂದು ಗಾಂಧಿ ಜಯಂತಿಗೆ ರಜೆ ಇದ್ದ ಕಾರಣ ಅಸಂಖ್ಯಾತ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಆ ದಿನ ಸುಮಾರು 2.14 ಕೋಟಿ ರೂ.ಹುಂಡಿ ಹಣ ಸಂಗ್ರಹವಾಗಿದೆ. ಒಂದೇ ದಿನ ಇಷ್ಟು ಮೊತ್ತದ ಹಣ ಸಂಗ್ರಹವಾಗಿರುವುದು ಇದೇ ಮೊದಲು ಎಂದು ತಿಳಿದು ಬಂದಿದೆ. 

ಕೊರೋನಾ ಮಹಾಮಾರಿ ಕಾಲಿಟ್ಟಾಗಿನಿಂದ ದೇಶದ ಎಲ್ಲಾ ದೇವಾಲಯಗಳನ್ನು ಮುಚ್ಚಲಾಗಿತ್ತು. ಮತ್ತೆ ಲಾಕ್​ಡೌನ್​ ಸಡಿಲಿಕೆಯಲ್ಲಿ ಜೂನ್ 11ರಂದು ತಿರುಪತಿ ದೇವಾಲಯವನ್ನು ತೆರೆಯಲಾಗಿತ್ತು. ಅದೂ ಸಹ ಇಂತಿಷ್ಟು ಭಕ್ತರು ಬರಬೇಕೆಂಬ ನಿರ್ಬಂಧದ ಮೇಲೆ. ಹಾಗಾಗಿ ನಿರ್ಬಂಧಗಳ ಅನ್ವಯ ಇತಿ-ಮಿತಿಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸತೊಡಗಿದ್ದರು. 

ಸೆಪ್ಟೆಂಬರ್ 6ರಂದು ಸುಮಾರು 13,486 ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಲಾಕ್​ಡೌನ್​ ಬಳಿಕ ಮೊದಲ ಬಾರಿಗೆ ದೇವಾಲಯದ ಆದಾಯ 1 ಕೋಟಿ ರೂ.ಗೂ ಮೀರಿತ್ತು. ದಿನ ಕಳೆದಂತೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ದೇವಾಲಯದ ಆದಾಯವೂ ಹೆಚ್ಚಾಗುತ್ತಿದೆ.

ಇನ್ನು, ಅಕ್ಟೋಬರ್ 2 ಗಾಂಧೀ ಜಯಂತಿಯಂದು ಸುಮಾರು 20,228 ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಮರುದಿನ ಅಂದರೆ ಅ.3ರಂದು ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಸುಮಾರಿ 2.14 ಕೋಟಿ ರೂ. ಸಂಗ್ರಹವಾಗಿದೆ.

ತಿರುಪತಿ ಶ್ರೀ ವೆಂಕಟೇಶ್ವರನ ದೇವಾಲಯದಲ್ಲಿ ಅ.16ರಿಂದ 24ರ ತನಕ ಬ್ರಹ್ಮೋತ್ಸವ ನಡೆಯಲಿದೆ. ಈ ವೇಳೆ ಹೆಚ್ಚಿನ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಹೀಗಾಗಿ ಹೆಚ್ಚಿನ ಆದಾಯದ ನಿರೀಕ್ಷೆ ಕೂಡ ಇದೆ.  

TRENDING