Saturday, October 24, 2020
Home ಜಿಲ್ಲೆ ಬೆಳಗಾವಿ ಸುರೇಶ ಅಂಗಡಿ ಸ್ಮಾರಕ ನಿರ್ಮಾಣಕ್ಕೆ ಕ್ರಮ: ಸಿಎಂ ಬಿ.ಎಸ್. ಯಡಿಯೂರಪ್ಪ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಸುರೇಶ ಅಂಗಡಿ ಸ್ಮಾರಕ ನಿರ್ಮಾಣಕ್ಕೆ ಕ್ರಮ: ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಳಗಾವಿರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅಂಗಡಿ ಕುಟುಂಬದವರಿಗೆ ಸಾಂತ್ವನ ಹೇಳಲು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ನವದೆಹಲಿಯಲ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಾಗುವುದು. ಇದಕ್ಕಾಗಿ ಅಗತ್ಯ ಅನುದಾನ ನೀಡುತ್ತೇನೆ. ಈ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಮಾರಕ ನಿರ್ಮಿಸುವುದು ನನ್ನ ಕರ್ತವ್ಯವಾಗಿದೆ ಎಂದರು.

ಸುರೇಶ ಅಂಗಡಿ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳುವುದಕ್ಕೂ ಆಗುತ್ತಿಲ್ಲ. ನಾಲ್ಕು ಬಾರಿ ಸಂಸದರಾಗಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅಪಾರ ಕೊಡುಗೆಯನ್ನು ಅವರು ನೀಡಿದ್ದಾರೆ. ಜಾಫರ್ ಶರೀಫ್ ಮಾದರಿಯಲ್ಲಿ ರೈಲ್ವೆಯಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಅವರಿಗೆ ಹಲವು ಬಾರಿ ಹೇಳಿದ್ದೆ ಎಂದರು.

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಕುಟುಂಬದವರನ್ನು ಬುಧವಾರ ಭೇಟಿಯಾಗಿ ಸಾಂತ್ವನ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ, ಅಂಗಡಿ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರಿಗೆ ಧೈರ್ಯ ತುಂಬಿದರು. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು.

ಭಗವಂತನ ಇಚ್ಛೆ ಏನಿತ್ತೋ ಗೊತ್ತಿಲ್ಲ. ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಜ್ವರ ಬಂದಿದ್ದರೂ ತಕ್ಷಣ ಚಿಕಿತ್ಸೆ ಪಡೆಯಲಿಲ್ಲ. ದೆಹಲಿಗೆ ಹೋದ ಮೇಲೂ ಸಕಾಲದಲ್ಲಿ ಚಿಕಿತ್ಸೆ ತೆಗೆದುಕೊಳ್ಳಲಿಲ್ಲ. ಆರೋಗ್ಯವಾಗಿದ್ದೇನೆ. ಹೀಗಾಗಿ ನನಗೇನೂ ಆಗುವುದಿಲ್ಲ ಎಂಬ ಭ್ರಮೆಯಲ್ಲಿ ಅವರು ಇದ್ದರೆಂದು ಕಾಣಿಸುತ್ತದೆ ಎಂದರು.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಹಾಕಿರುವ ಕುರಿತು ಪ್ರತಿಕ್ರಿಯೆಗೆ ಅವರು ನಿರಾಕರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಇದ್ದಾರೆ.

TRENDING