Wednesday, October 21, 2020
Home ಬೆಂಗಳೂರು ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದಾರೆ: ಡಿಕೆ.ಶಿ ಗಂಭೀರ ಆರೋಪ

ಇದೀಗ ಬಂದ ಸುದ್ದಿ

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರಿ ಗಾತ್ರದ ಎರಡು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ....

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದಾರೆ: ಡಿಕೆ.ಶಿ ಗಂಭೀರ ಆರೋಪ

ಬೆಂಗಳೂರು: ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿಗೆ ಹೊಡೆದಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ತಮ್ಮನ್ನು ಭೇಟಿಯಾದ ನಂಜಾವದೂತ ಸ್ವಾಮೀಜಿಗಳ ಜೊತೆ ಮಾತನಾಡಿರುವ ಅವರು, ಈ ಆರೋಪವನ್ನು ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಸಿಬಿಐ ದಾಳಿ ನಡೆಸಿರುವುದು ನನಗೆ ಬೇಸರವಾಗಿಲ್ಲ. ಇದೆಲ್ಲವೂ ರಾಜಕೀ ಷಡ್ಯಂತ್ರ. ಕೆಪಿಸಿಸಿ ಅಧ್ಯಕ್ಷನಾದ ಬಳಿಕ ನಾನು ತುಂಬಾ ಸಕ್ರಿಯವಾಗಿದ್ದು, ಬಿಜೆಪಿ ನಾಯಕರ ಕಣ್ಣು ಕುಕ್ಕಿದಂತಾಗಿದೆ. ಈಗ ಉಪಚುನಾವಣೆ ಬಂದಿರುವುದರಿಂದ ಸಿಬಿಐ ದಾಳಿ ನಡೆಯುವಂತೆ ಮಾಡಿದ್ದಾರೆಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ಸಿಬಿಐ ಅಧಿಕಾರಿಗಳು ತಮ್ಮೊಂದಿಗೆ ಕಠಿಣವಾಗಿ ನಡೆದುಕೊಂಡರು ಎಂದು ನನ್ನ ಸಿಬ್ಬಂದಿಗಳು ಹೇಳಿದ್ದರು. ಆದರೆ, ಈ ಬಗ್ಗೆ ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದೇನೆಂದು ಹೇಳಿದ್ದಾರೆ.

ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದವರು ಸಿಬಿಐ ಅಧಿಕಾರಿಗಳೇ ಅಥವಾ ಬೆಂಗಳೂರು ಪೊಲೀಸರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಸಾರ್ವಜನಿಕವಾಗಿ ಯಾವುದೇ ಹೇಳಿಕೆಯನ್ನೂ ನೀಡುವುದಿಲ್ಲ. ಜಿ.ಪರಮೇಶ್ವರ ಸಿಬ್ಬಂದಿಗಳಾದ ಪರಿಸ್ಥಿತಿ ನನ್ನ ಸಿಬ್ಬಂದಿಗಳಿಗಾಗುವುದು ನನಗಿಷ್ಟವಿಲ್ಲ. ದಾಳಿ ವೇಳೆ ಏನೇನಾಯಿತು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇನೆಂದು ತಿಳಿಸಿದ್ದಾರೆ.

2019ರಲ್ಲಿ ಕಾಂಗ್ರೆಸ್ ನಾಯಕ ಪರಮೇಶ್ವರ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ಬಳಿಕ ಪರಮೇಶ್ವರ್ ಅವರ ಆಪ್ತ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣಾಗಿದ್ದರು.

TRENDING