Monday, October 19, 2020
Home ಬೆಂಗಳೂರು ಡ್ರಗ್ ಕೇಸ್; ಸಿಸಿಬಿಯಿಂದ ಇಂದು ಮುತ್ತಪ್ಪ ರೈ ಮಗ ರಿಕ್ಕಿ ರೈ ವಿಚಾರಣೆ ಸಾಧ್ಯತೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಡ್ರಗ್ ಕೇಸ್; ಸಿಸಿಬಿಯಿಂದ ಇಂದು ಮುತ್ತಪ್ಪ ರೈ ಮಗ ರಿಕ್ಕಿ ರೈ ವಿಚಾರಣೆ ಸಾಧ್ಯತೆ

 ಬೆಂಗಳೂರು (. 7): ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಸ್ಯಾಂಡಲ್ವುಡ್ ಡ್ರಗ್ ಕೇಸ್ ಆರೋಪಿಗಳ ಜೊತೆ ನಿಕಟ ಸಂಪರ್ಕದಲ್ಲಿದ್ದರು ಎಂಬ ಬಗ್ಗೆ ಸಾಕ್ಷಿಗಳು ದೊರೆತಿದ್ದರಿಂದ ನಿನ್ನೆ ಮುತ್ತಪ್ಪ ರೈಗೆ ಸೇರಿದ ಎರಡು ಮನೆಗಳ ಮೇಲೆ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಪ್ರಕರಣದಲ್ಲಿ ಇಂದು ಸಿಸಿಬಿ ಕಚೇರಿಯಲ್ಲಿ ರಿಕ್ಕಿ ರೈ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಮಂಗಳವಾರ ನಡೆದ ದಾಳಿಯ ಬಳಿಕ ಸಿಸಿಬಿ ಪೊಲೀಸರು ರಿಕ್ಕಿ ರೈ ಮೊಬೈಲ್ಗಳನ್ನು ವಶಕ್ಕೆ ಪಡೆದು, ರಿಟ್ರೀವ್ಗೆ ಕಳುಹಿಸಿದ್ದರು. ಎರಡು ದಿನದ ಒಳಗೆ ವಿಚಾರಣೆಗೆ ಕರೆಯುವುದಾಗಿ ತಿಳಿಸಿದ್ದ ಸಿಸಿಬಿ ಅಧಿಕಾರಿಗಳು ಇಂದೇ ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ. ಡ್ರಗ್ ಕೇಸ್ ಆರೋಪಿ ಆದಿತ್ಯ ಅಳ್ವ ಸಂಪರ್ಕದ ಕುರಿತಾಗಿ ಮಾಹಿತಿ ಪಡೆಯಲು ಸಿಸಿಬಿ ಇಂದೇ ವಿಚಾರಣೆ ನಡೆಸೋ ಸಾಧ್ಯತೆಯಿದೆ

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಮಂಗಳವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಸದಾಶಿವನಗರದ ಮನೆಯ ಜೊತೆಗೆ ಬಿಡದಿಯಲ್ಲಿ ಮುತ್ತಪ್ಪ ರೈ ವಾಸವಿದ್ದ ಮನೆಯ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಏಳು ಬೊಲೆರೋ ಕಾರುಗಳಲ್ಲಿ ಬಂದಿದ್ದ 16 ಜನ ಸಿಸಿಬಿ ಅಧಿಕಾರಿಗಳು ಬೆಳಗ್ಗೆ 6.30 ರ ವೇಳೆಗೆ ರಾಮನಗರದ ಬಿಡದಿ ಬಳಿ‌ ಇರುವ ರಿಕ್ಕಿ ರೈ ತಂದೆ ಮುತ್ತಪ್ಪ ರೈ ನಿವಾಸಕ್ಕೆ ಹಾಜರಾಗಿ ರೇಡ್ ಮಾಡಿದರು. ಸರ್ಚ್‌ ವಾರೆಂಟ್ ಪಡೆದು ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್ ಮಾಹಿತಿ ಮೇರೆಗೆ ರಿಕ್ಕಿ ಮನೆ ಮೇಲೆ ದಾಳಿ ನಡೆಸಿದರು. ಆದಿತ್ಯ ಆಳ್ವ ಆಯೋಜನೆ‌ ಮಾಡುತ್ತಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ರಿಕ್ಕಿ ರೈ ವಿಚಾರಣೆ ನಡೆದಿದೆ ಎನ್ನಲಾಗುತ್ತಿದೆ.

ಸ್ಯಾಂಡಲ್​ವುಡ್​ ಡ್ರಗ್ ಕೇಸ್​ನಲ್ಲಿ ಬಂಧಿತರಾಗಿರುವ ಡ್ರಗ್ ಪೆಡ್ಲರ್​ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್​ನಲ್ಲಿ ತಲೆ ಮರೆಸಿಕೊಂಡಿರುವ ಆದಿತ್ಯ ಆಳ್ವ ಜೊತೆ ನಿಕಟ ಒಡನಾಟ ಹೊಂದಿದ್ದ ಆರೋಪದಲ್ಲಿ ನಿನ್ನೆ ಮಾಜಿ ಡಾನ್ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಹಿಂದೆ ಎನ್​ಸಿಬಿ ನೊಟೀಸ್ ನೀಡಿದ್ದ ಯಶಸ್ ಜೊತೆಗೂ ರಿಕ್ಕಿ ರೈ ಸಂಪರ್ಕವಿರೋ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು.

ಡ್ರಗ್ಸ್ ಪ್ರಕರಣದ ಕೆಲ ಆರೋಪಿಗಳಿಗೆ ಆಶ್ರಯ ನೀಡಿದ ಮಾಹಿತಿ ಹಿನ್ನಲೆಯಲ್ಲಿ ರಿಕ್ಕಿ ರೈ ಮನೆ ಮೇಲೆ ಸರ್ಚ್ ವಾರೆಂಟ್ ಪಡೆದು ರೇಡ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ರಿಕ್ಕಿ ರೈ ಭಾಗಿಯಾಗಿರೋ ಬಗ್ಗೆ ಅನುಮಾನ ಇದೆ. ಶೋಧಕಾರ್ಯದ ವೇಳೆ ಕೆಲ ವಸ್ತುಗಳು ಸಿಕ್ಕಿವೆ. ಸದಾಶಿವನಗರ, ಬಿಡದಿ ಬಳಿ ರೇಡ್ ಆಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದರು.  

TRENDING