Saturday, October 24, 2020
Home ಬೆಂಗಳೂರು ದಾಳಿ ಮಾಡಿಸಿ, ಉಪಚುನಾವಣೆ ಗೆಲ್ಲುವ ಅಗತ್ಯವಿಲ್ಲ: ಆರ್‌.ಅಶೋಕ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ದಾಳಿ ಮಾಡಿಸಿ, ಉಪಚುನಾವಣೆ ಗೆಲ್ಲುವ ಅಗತ್ಯವಿಲ್ಲ: ಆರ್‌.ಅಶೋಕ

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ಮಾಡಿಸಿ, ಉಪಚುನಾವಣೆ ಗೆಲ್ಲುವ ಅಗತ್ಯವಿಲ್ಲ’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿಬಿಐ ಸ್ವಾಯತ್ತ ಸಂಸ್ಥೆಯಾಗಿದ್ದು, 2017 ಮತ್ತು 2019 ರಲ್ಲಿ ಅವರ ವಿರುದ್ಧದ ಪ್ರಕರಣಗಳ ಮುಂದುವರಿದ ಭಾಗವಾಗಿ ಶೋಧ ನಡೆದಿದೆ. ಬಿಜೆಪಿಗೂ ಈ ದಾಳಿಗೂ ಸಂಬಂಧವಿಲ್ಲ’ ಎಂದರು.

‘ಹಿಂದೆ ಯುಪಿಎ ಸರ್ಕಾರ ಇದ್ದಾಗ ಜನಾರ್ದನ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮತ್ತು ಇತರ ತನಿಖಾ ಸಂಸ್ಥೆಗಳು ದಾಳಿ ನಡೆಸಿದವು. ಅದನ್ನು ಕಾಂಗ್ರೆಸ್‌ ಪಕ್ಷವೇ ಮಾಡಿಸಿದ್ದು ಎಂದು ಹೇಳಲು ಆಗುತ್ತದೆಯೇ’ ಎಂದು ಅಶೋಕ ಪ್ರಶ್ನಿಸಿದರು.

‘ಶಿರಾ ಉಪಚುನಾವಣೆಯಲ್ಲಿ ಆರ್‌ಎಸ್‌ಎಸ್‌ನವರು ₹50 ಕೋಟಿ ಖರ್ಚು ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ದೂರಿದ್ದಾರೆ. ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಆರ್‌ಎಸ್‌ಎಸ್ ಒಂದು‌ ಸೇವಾ ಸಂಘಟನೆಯೇ ಹೊರತು ರಾಜಕೀಯ ಸಂಘಟನೆಯಲ್ಲ’ ಎಂದು ಅವರು ಹೇಳಿದರು.

TRENDING