Friday, October 23, 2020
Home ಜಿಲ್ಲೆ ಮೈಸೂರು ದಸರಾ ಮಹೋತ್ಸ: ಅರಮನೆಯಿಂದ ಬೆಟ್ಟಕ್ಕೆ ಉತ್ಸವ ಮೂರ್ತಿ

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ದಸರಾ ಮಹೋತ್ಸ: ಅರಮನೆಯಿಂದ ಬೆಟ್ಟಕ್ಕೆ ಉತ್ಸವ ಮೂರ್ತಿ

ಮೈಸೂರು: ದಸರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಜೋರಾ ಗಿದ್ದು, ಜಂಬೂಸವಾರಿ ವೇಳೆ ಅಂಬಾರಿ ಯಲ್ಲಿ ಪ್ರತಿಷ್ಠಾಪನೆ ಆಗಲಿರುವ ಉತ್ಸವ ಮೂರ್ತಿಯನ್ನು ಬುಧವಾರ ಅಂಬಾವಿಲಾಸ ಅರಮನೆಯಿಂದ ಚಾಮುಂಡಿಬೆಟ್ಟಕ್ಕೆ ತೆಗೆದುಕೊಂಡು ಹೋಗಲಾಯಿತು.

ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯ ನಡೆಸುವ ಉದ್ದೇಶ ದಿಂದ ಅರಮನೆ ಮಂಡಳಿ ವತಿ ಯಿಂದ ಮುಜರಾಯಿ ಇಲಾಖೆಗೆ ಹಸ್ತಾಂತರಿ ಸಲಾಗಿದೆ. ಈ ಉತ್ಸವ ಮೂರ್ತಿಗೆ ಬೆಟ್ಟದಲ್ಲಿ ನವರಾತ್ರಿ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

‌ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ಶುಚಿಗೊಳಿಸಿ ಪೂಜೆಗೆ ಸಜ್ಜುಗೊಳಿಸಲಾಗುತ್ತದೆ. ಬೆಟ್ಟದಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ವೇಳೆ ತಾಯಿಗೆ ಪುಷ್ಪಾರ್ಚನೆ ನಡೆಯಲಿದೆ. ಬೆಳ್ಳಿ ರಂಥದಲ್ಲಿ ಮೂರ್ತಿ ಇಡಲಾಗುತ್ತದೆ.

ಆ ಬಳಿಕ ಜಂಬೂಸವಾರಿ ದಿನ ಉತ್ಸವ ಮೂರ್ತಿಯನ್ನು ಮತ್ತೆ ಅರಮನೆಗೆ ತರಲಾಗುತ್ತದೆ. ಪಂಚಲೋಹದಿಂದ ಮಾಡಿರುವ ಈ ಮೂರ್ತಿಯನ್ನು 750 ಕೆ.ಜಿ.ತೂಕದ ಚಿನ್ನದ ಅಂಬಾರಿಯೊಳಗೆ ಪ್ರತಿಷ್ಠಾಪನೆ ಮಾಡಿ, ಅಭಿಮನ್ಯು ಆನೆ ಮೂಲಕ ಮೆರವಣಿಗೆ ಮಾಡಿಸಲಾಗುತ್ತದೆ. ಈ ಬಾರಿ ಅರಮನೆ ಆವರಣದಲ್ಲೇ ಜಂಬೂಸವಾರಿ ನಡೆಯಲಿದೆ.

ಚಾಮುಂಡೇಶ್ವರಿ ದೇಗುಲದ ಕಾರ್ಯನಿರ್ವಹಣಾಧಿಕಾರಿ ಯತೀಶ್‌, ಇಲಾಖೆಯ ಜಗದೀಶ್‌ ಕುಮಾರ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ , ಅರಮನೆ ಭದ್ರತಾ ಎಸಿಪಿ ಚಂದ್ರಶೇಖರ್‌ ಇದ್ದರು.

TRENDING