Monday, October 19, 2020
Home ಸುದ್ದಿ ಜಾಲ ಗುಡ್ ನ್ಯೂಸ್ : ರೈಲು ಹೊರಡುವ 5 ನಿಮಿಷ ಮುನ್ನವೂ ಟಿಕೆಟ್ ಲಭ್ಯ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಗುಡ್ ನ್ಯೂಸ್ : ರೈಲು ಹೊರಡುವ 5 ನಿಮಿಷ ಮುನ್ನವೂ ಟಿಕೆಟ್ ಲಭ್ಯ

ನವದೆಹಲಿ: ರೈಲು ಹೊರಡುವ 5 ನಿಮಿಷ ಮೊದಲು ಕೂಡ ಟಿಕೆಟ್ ಬುಕ್ಕಿಂಗ್ ಮಾಡುವ ಹೊಸ ವ್ಯವಸ್ಥೆ ಇಂದಿನಿಂದ ಜಾರಿಗೆ ಬರಲಿದೆ. ಟಿಕೆಟ್ ರದ್ದು ಮಾಡಲು ಕೂಡ ಅವಕಾಶ ನೀಡಲಾಗಿದೆ.

ರೈಲು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಕೊರೋನಾ ಲಾಕ್ ಡೌನ್ ಜಾರಿಯಾಗುವ ಮೊದಲು ರೈಲು ಹೊರಡುವ 30 ನಿಮಿಷ ಮೊದಲಿಗೆ ಟಿಕೆಟ್ ಬುಕ್ ಮಾಡುವ ವ್ಯವಸ್ಥೆ ಇತ್ತು. ನಂತರದಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭವಾಗಿ ರೈಲು ಹೊರಡುವ 4 ಗಂಟೆಗಳ ಮೊದಲು ಮೊದಲ ಚಾರ್ಟ್ ಸಿದ್ಧಪಡಿಸಲಾಗುತ್ತಿತ್ತು.

ರೈಲು ಹೊರಡುವ 2 ಗಂಟೆ ಮೊದಲು ಎರಡನೇ ಚಾರ್ಟ್ ಸಿದ್ಧಪಡಿಸಲಾಗುತ್ತಿತ್ತು. ಈಗ ಈ ಮೊದಲು ಇದ್ದ ವ್ಯವಸ್ಥೆಯನ್ನೇ ಪುನರಾರಂಭ ಮಾಡಲಾಗುತ್ತಿದೆ. ಮೊದಲ ಚಾರ್ಟನ್ನು ರೈಲು ಸಂಚಾರ ಆರಂಭವಾಗುವ 4 ಗಂಟೆ ಮೊದಲು ಸಿದ್ಧಪಡಿಸಲಿದ್ದು ಸೀಟುಗಳು ಉಳಿದಿದ್ದರೆ ಎರಡನೇ ಚಾರ್ಟನ್ನು ರೈಲು ಹೊರಡುವ 30 ನಿಮಿಷದಿಂದ 5 ನಿಮಿಷದ ನಡುವಿನ ಅವಧಿಯಲ್ಲಿ ಸಿದ್ಧಪಡಿಸಲಾಗುವುದು.

ಇದರಿಂದ ರೈಲು ಹೊರಡುವ 5 ನಿಮಿಷ ಮೊದಲು ಸೀಟು ಖಾಲಿ ಇದ್ದರೆ ಕೌಂಟರ್ನಲ್ಲಿ ಅಥವಾ ಆನ್ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ. ಈ ಅವಧಿಯಲ್ಲಿ ಬುಕ್ ಆಗಿರುವ ಟಿಕೆಟ್ ಗಳನ್ನು ರದ್ದು ಮಾಡಲು ಅವಕಾಶವಿದ್ದು ಇದರಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.

TRENDING