Saturday, October 24, 2020
Home ಅಂತರ್ ರಾಷ್ಟ್ರೀಯ ಮೈಕ್ರೋಸಾಫ್ಟ್ ನ ಕೆಲವು ಉದ್ಯೋಗಿಗಳಿಗೆ ಶಾಶ್ವತ ವರ್ಕ್ ಫ್ರಂ ಹೋಮ್ ಸೌಲಭ್ಯ!

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಮೈಕ್ರೋಸಾಫ್ಟ್ ನ ಕೆಲವು ಉದ್ಯೋಗಿಗಳಿಗೆ ಶಾಶ್ವತ ವರ್ಕ್ ಫ್ರಂ ಹೋಮ್ ಸೌಲಭ್ಯ!

ನ್ಯೂಯಾರ್ಕ್ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ತನ್ನ ಕೆಲವು ಉದ್ಯೋಗಿಗಳು ಇಚ್ಛೆ ಪಟ್ಟರೇ ಮನೆಯಿಂದಲೇ ಶಾಶ್ವತವಾಗಿ ಕೆಲಸ ಮಾಡಲು ಅವಕಾಶ ನೀಡುವುದಾಗಿ ತಿಳಿಸಿದೆ. ಈ ಕುರಿತು ಅಮೆರಿಕಾ ಮಾಧ್ಯಮಗಳು ವರದಿ ಮಾಡಿದ್ದು, ಕೋವಿಡ್ 19 ಸಾಂಕ್ರಮಿಕ ರೋಗದ ಕಾರಣದಿಂದ ಈವರೆಗೂ ಉದ್ಯೋಗಿಗಳು ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಇನ್ನು ಮುಂದೆಯೂ ಉದ್ಯೋಗಿಗಳು ಬಯಸಿಸದರೇ ಈ ಯೋಜನೆಯನ್ನು ಶಾಶ್ವತವಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದೆ.

ಕೋವಿಡ್ ಭೀತಿಯಿಂದ ಪ್ರಸ್ತುತ ಹಲವಾರು ಮೈಕ್ರೋಸಾಫ್ಟ್ ಉದ್ಯೋಗಿಗಳು ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಕ್ರೋಸಾಫ್ಟ್ ಕೂಡ ಅಮೆರಿಕಾದಲ್ಲಿನ ತನ್ನ ಕಚೇರಿಗಳನ್ನು 2021ರ ಜನವರಿಗೂ ತೆರೆಯುವುದಿಲ್ಲ ಎಂದು ಈಗಾಗಲೇ ಪ್ರಕಟಣೆ ಹೊರಡಿಸಿದೆ.

ಅದಾಗ್ಯೂ ಒಂದು ವೇಳೆ ಕಚೇರಿ ತೆರೆದರೂ ಉದ್ಯೋಗಿಗಳು ತಮ್ಮ ಮೇಲ್ವಿಚಾರಕರ ಅನುಮತಿ ಪಡೆದು ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಬಹುದು. ಆದರೆ ಅವರು ತಮ್ಮ ಕಚೇರಿಯಲ್ಲಿ ಬಳಕೆ ಮಾಡುವ ಜಾಗವನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಕೋವಿಡ್ 19 ಸಾಂಕ್ರಮಿಕ ರೋಗ ನಮಗೆಲ್ಲಾ ಯೋಚಿಸಲು, ಜೀವಿಸಲು, ಹೊಸ ರೀತಿಯಲ್ಲಿ ಕಾರ್ಯನಿರ್ವಹಿಸಲು ಸವಾಲನ್ನು ನೀಡಿದೆ. ಮಾತ್ರವಲ್ಲದೆ ಕೆಲಸದ ವಿಧಾನದಲ್ಲೂ ಮತ್ತಷ್ಟು ಬದಲಾವಣೆ ತರಲು ಇದರಿಂದ ಸಾಧ್ಯವಾಗಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ ಕ್ಯಾಥಿಲಿನ್ ಹೋಗನ್ ತಿಳಿಸಿದ್ದಾರೆ.

ಈಗಾಗಲೇ ತಾತ್ಕಾಲಿಕವಾಗಿ ಅಮೆರಿಕಾದಲ್ಲಿರುವ ಮೈಕ್ರೋಸಾಫ್ಟ್ ನ ಕಚೇರಿಗಳನ್ನು ತೆರೆಯದಿರಲು ಸಂಸ್ಥೆ ನಿರ್ಧರಿಸಿದೆ. ಮನೆಯಿಂದಲೇ ಕೆಲಸ ನಿರ್ವಹಿಸುವವರಿಗೆ ವೇತದಲ್ಲಿಯೂ ಬದಲಾವಣೆಯಾಗಲಿದೆ. ಜೂನ್ ತಿಂಗಳಾಂತ್ಯಕ್ಕೆ ಮೈಕ್ರೋಸಾಫ್ಟ್ 1,63,000 ಜನರನ್ನು ನೇಮಕ ಮಾಡಿಕೊಂಡಿದೆ.

TRENDING