Monday, October 26, 2020
Home ಸುದ್ದಿ ಜಾಲ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ವಿರುದ್ಧ ಸಿಜೆಐಗೆ ಸಿಎಂ ಜಗನ್ ದೂರು

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ವಿರುದ್ಧ ಸಿಜೆಐಗೆ ಸಿಎಂ ಜಗನ್ ದೂರು

ಹೈದರಾಬಾದ್‌: ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ ಮತ್ತು ಆಂಧ್ರ ಪ್ರದೇಶ ಹೈಕೋರ್ಟ್‌ ನಡುವಿನ ತಿಕ್ಕಾಟ ಮತ್ತಷ್ಟು ಹೆಚ್ಚಿದ್ದು, ಮುಖ್ಯಮಂತ್ರಿಯು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ವಿರುದ್ಧ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) ಪರವಾಗಿ ಸರ್ಕಾರವನ್ನು ಅತಂತ್ರಗೊಳಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್‌.ವಿ.ರಮಣ ಪ್ರಯತ್ನಿಸುತ್ತಿರುವುದಾಗಿ ಆರೋಪಿಸಲಾಗಿದೆ.

ಚಂದ್ರಬಾಬು ನಾಯ್ಡು ಅವರಿಗೆ ನ್ಯಾಯಮೂರ್ತಿ ರಮಣ ಅವರು ಆಪ್ತರಾಗಿದ್ದಾರೆ ಹಾಗೂ ಟಿಡಿಪಿಗೆ ಸಹಕಾರ ನೀಡಲು ಹಸ್ತಕ್ಷೇಪ ಮಾಡುತ್ತಿದ್ದಾರೆ, ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದಾಗ ನ್ಯಾಯಸ್ಥಾನದ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ಅವರಿಗೆ ಸಿಎಂ ಜಗನ್‌ಮೋಹನ್‌ ರೆಡ್ಡಿ ಪತ್ರ ಬರೆದಿದ್ದಾರೆ. ಆ ಕುರಿತು ಶನಿವಾರ ಸಿಎಂ ಪ್ರಧಾನ ಸಲಹೆಗಾರರಾಗಿರುವ ಅಜೇಯ ಕಲ್ಲಾಂ ಮಾಹಿತಿ ನೀಡಿದ್ದಾರೆ.

ಎನ್‌.ವಿ.ರಮಣ ಅವರು ಸುಪ್ರೀಂ ಕೋರ್ಟ್‌ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ ಹಾಗೂ ಬೋಬ್ಡೆ ಅವರ ನಂತರ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನೇಮಕವಾಗುವ ಸಾಧ್ಯತೆ ಇರುವುದರಿಂದ ಆಂಧ್ರ ಸರ್ಕಾರದ ಆರೋಪ ಚರ್ಚೆಗೆ ಗ್ರಾಸವಾಗಿದೆ.

‘ನ್ಯಾಯಾಂಗದ ನಿರ್ಧಾರಗಳನ್ನು ಬಹಿರಂಗವಾಗಿ ಟೀಕಿಸುವುದು ನ್ಯಾಯಾಂಗ ನಿಂದನೆಯಾಗಬಹುದು. ಆದರೆ, ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರ ಅಪಾರವಾದ ಗೌರವ ಹೊಂದಿರುವುದನ್ನು ಸಿಎಂ ಪತ್ರವು ತಿಳಿಸುತ್ತದೆ’ ಎಂದು ಅಜೇಯ ಕಲ್ಲಾಂ ಹೇಳಿದ್ದಾರೆ. ಹೈಕೋರ್ಟ್‌ನ ಹಲವು ನ್ಯಾಯಮೂರ್ತಿಗಳ ಮೇಲೆ ರಮಣ ಅವರು ಪ್ರಭಾವ ಬೀರಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಗಮನ ಸೆಳೆಯುವುದೂ ಪತ್ರದ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿದೆ.

2019ರ ಮೇನಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಅಧಿಕಾರ ವಹಿಸಿದ ನಂತರ ಚಂದ್ರಬಾಬು ನಾಯ್ಡು ಅಧಿಕಾರ ಅವಧಿಯಲ್ಲಿ (2014 ಜೂನ್‌ನಿಂದ ಮೇ 2019) ನಡೆದಿರುವ ಎಲ್ಲ ಒಪ್ಪಂದಗಳ ಕುರಿತು ವಿಚಾರಣೆ ನಡೆಸುವಂತೆ ಸಿಎಂ ಜಗನ್‌ಮೋಹನ್‌ ರೆಡ್ಡಿ ಆದೇಶಿಸಿದ್ದಾರೆ. ಅಂದಿನಿಂದಲೂ ರಾಜ್ಯದಲ್ಲಿ ನ್ಯಾಯಾಂಗದ ಮೇಲೆ ನ್ಯಾಯಮೂರ್ತಿ ಎನ್‌.ವಿ.ರಮಣ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

TRENDING