Wednesday, October 28, 2020
Home ಕ್ರಿಕೆಟ್ IPL 2020 LIVE Score, ಹೈದರಾಬಾದ್- ರಾಜಸ್ಥಾನ್ ಹಣಾಹಣಿ: ಟಾಸ್ ಗೆದ್ದ ವಾರ್ನರ್ ಪಡೆ ಬ್ಯಾಟಿಂಗ್...

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

IPL 2020 LIVE Score, ಹೈದರಾಬಾದ್- ರಾಜಸ್ಥಾನ್ ಹಣಾಹಣಿ: ಟಾಸ್ ಗೆದ್ದ ವಾರ್ನರ್ ಪಡೆ ಬ್ಯಾಟಿಂಗ್ ಆಯ್ಕೆ

 ದುಬೈ: ಕಳೆದ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿರುವ ಹುಮ್ಮಸ್ಸಿನಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತು ಸತತ ಸೋಲುಗಳಿಂದ ಕಂಗೆಟ್ಟಿರುವ ರಾಜಸ್ಥಾನ ರಾಯಲ್ಸ್ ತಂಡಗಳು ಇಂದಿನ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ 69 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವ ವಾರ್ನರ್ ಪಡೆ ಉತ್ಸಾಹದಲ್ಲಿದೆ. ನಾಯಕ ವಾರ್ನರ್, ಕೀಪರ್ ಬೆರಿಸ್ಟೋ, ವಿಲಿಯಮ್ಸನ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್ ವಿಭಾಗವೂ ಸದೃಢವಾಗಿದ್ದು, ರಶೀದ್ ಖಾನ್, ನಟರಾಜನ್, ಸಂದೀಪ್ ಶರ್ಮಾ ಉತ್ತಮ ದಾಳಿ ಸಂಘಟಿಸುತ್ತಿದ್ದಾರೆ.

ಸತತ ಸೋಲಿನಿಂದ ಕಂಗೆಟ್ಟಿರುವ ರಾಜಸ್ಥಾನ ರಾಯಲ್ಸ್ ಇಂದಾದರು ಗೆಲುವು ಕಾಣುವ ನಿರೀಕ್ಷೆಯಲ್ಲಿದೆ. ತಂಡದಲ್ಲಿ ಬೌಲರ್ ಗಳು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಆದರೆ ಬ್ಯಾಟ್ಸ್ ಮನ್ ಗಳು ವಿಫಲರಾಗುತ್ತಿರುವುದು ನಾಯಕ ಸ್ಮಿತ್ ಗೆ ತಲೆನೋವಾಗಿ ಪರಿಣಮಿಸಿದೆ.

ತಂಡಗಳು
ಹೈದರಾಬಾದ್: ಡೇವಿಡ್ ವಾರ್ನರ್ (ನಾ), ಜಾನಿ ಬೈರ್‌ಸ್ಟೋವ್ (ವಿ.ಕೀ), ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಾಮ್ ಗರ್ಗ್, ಅಭಿಷೇಕ್ ಶರ್ಮಾ, ವಿಜಯ್ ಶಂಕರ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಖಲೀಲ್ ಅಹ್ಮದ್.

ರಾಜಸ್ಥಾನ: ಜೋಸ್ ಬಟ್ಲರ್ (ವಿ.ಕೀ), ಸ್ಟೀವ್ ಸ್ಮಿತ್ (ನಾ), ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ರಿಯಾನ್ ಪರಾಗ್, ರಾಬಿನ್ ಉತ್ತಪ್ಪ, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ವರುಣ್ ಆರನ್.

TRENDING