Friday, October 23, 2020
Home ಅಂತರ್ ರಾಜ್ಯ ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ: 16 ವರ್ಷದ ಬಾಲಕನ ಅರೆಸ್ಟ್

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ: 16 ವರ್ಷದ ಬಾಲಕನ ಅರೆಸ್ಟ್

ಅಹಮದಾಬಾದ್‌: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಐದು ವರ್ಷದ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಪೊಲೀಸರು 16 ವರ್ಷದ ಬಾಲಕನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ. ಈ ಸಂಬಂಧ ಧೋನಿ ಪತ್ನಿ ಸಾಕ್ಷಿ ಸಿಂಗ್‌ ರಾಂಚಿ ಪೊಲೀಸರಿಗೆ ದೂರು ನೀಡಿದ್ದರು. ಬೆದರಿಕೆ ಹಾಕಿರುವ ಬಾಲಕ 12ನೇ ತರಗತಿಯಲ್ಲಿ ಓದುತ್ತಿದ್ದು ಕಛ್‌ ಸಮೀಪದ ಮುಂದ್ರಾ ಗ್ರಾಮದ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ರಾಂಚಿ ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪಿಯ ಬಗ್ಗೆ ಗುಜರಾತ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಛ್‌ ಪೊಲೀಸರು ಆರೋಪಿಯನ್ನು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತ ಬಾಲಕ ಬೆದರಿಕೆ ಹಾಕಿರುವ ಬಗ್ಗೆ ತಪ್ಪು ಒಪ್ಪಿಕೊಂಡಿದ್ದು ಅವನನ್ನು ರಾಂಚಿ ಪೊಲೀಸರ ವಶಕ್ಕೆ ಒಪ್ಪಿಸಲಾಗುವುದು ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಮೊದಲು ಆಟಗಾರರ ಪತ್ನಿಯರು ಅಥವಾ ಗೆಳತಿಯರಿಗೆ ಟ್ರೋಲ್‌ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗುತ್ತಿತ್ತು. ಆದರೆ, ಈಗ ಧೋನಿಯವರ ಐದು ವರ್ಷದ ಮಗಳಿಗೆ ಬೆದರಿಕೆ ಹಾಕಿದ್ದು ಮೃಗೀಯ ವರ್ತನೆಗಿಂತಲೂ ಕೀಳಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

TRENDING