Wednesday, October 21, 2020
Home ಬೆಂಗಳೂರು ಆರ್ ಆರ್ ನಗರದಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ : ಸಚಿವ ಎಸ್.ಟಿ.ಸೋಮಶೇಖರ್

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಆರ್ ಆರ್ ನಗರದಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ : ಸಚಿವ ಎಸ್.ಟಿ.ಸೋಮಶೇಖರ್

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿಯಿಂದಲೇ ಟಿಕೆಟ್ ಸಿಗಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ವರಿಷ್ಠರು ತೊಡಗಿಸಿಕೊಂಡ ಕಾರಣ ರಾಜ್ಯದ ಎರಡು ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಲು ವಿಳಂಬವಾಗಿದೆ ಎಂದರು.

ಯಾವುದೇ ಕಾರಣಕ್ಕೂ ಮುನಿರತ್ನ ಅವರಿಗೆ ಆರ್‍ಆರ್ ನಗರದಿಂದ ಟಿಕೆಟ್ ಕೈ ತಪ್ಪುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಏಕೆಂದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ನಾನೂ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಿರುವಾಗ ಒಬ್ಬರಿಗೆ ಟಿಕೆಟ್ ಕೈ ತಪ್ಪಿಸಲು ಹೇಗೆ ಸಾಧ್ಯ ಎಂದು ಸೋಮಶೇಖರ್ ಪ್ರಶ್ನಿಸಿದರು.

ಒಂದು ವೇಳೆ ಟಿಕೆಟ್ ನೀಡುವುದು ನನ್ನ ಕೈಯಲ್ಲಿದ್ದರೆ ನಾನೇ ಮುನಿರತ್ನ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿದ್ದೆ. ಆದರೆ, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರತಿಯೊಂದನ್ನೂ ಕೂಲಂಕಶವಾಗಿ ಪರಿಶೀಲಿಸಿ ತೀರ್ಮಾನಿಸುತ್ತದೆ. ಏನೇ ಆದರೂ ಮುನಿರತ್ನ ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ವಿಶ್ವಾಸದಿಂದ ನುಡಿದರು.

ಕೆಲವರು ಸುಖಾಸುಮ್ಮನೆ ಟಿಕೆಟ್ ಕೈ ತಪ್ಪಲಿದೆ ಎಂಬ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇದರಲ್ಲಿ ಎಳ್ಳಷ್ಟೂ ಸತ್ಯಾಂಶವಿಲ್ಲ. ನಾವೆಲ್ಲರೂ ಅವರಿಗೇ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದೇವೆ. ವರಿಷ್ಠರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಇನ್ನು ಸೋಮಶೇಖರ್ ಅವರ ಹೇಳಿಕೆಗೆ ಧ್ವನಿಗೂಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರ್‍ಆರ್ ನಗರದಿಂದ ಮುನಿರತ್ನಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಆಶ್ವಾಸನೆ ನೀಡಿದ್ದಾರೆ.

ಪಕ್ಷದ ಕೋರ್ ಕಮಿಟಿಯಲ್ಲಿ ನಡೆದ ನಿರ್ಧಾರದಂತೆ ಈ ಕ್ಷೇತ್ರದಿಂದ ಎರಡು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಏನೇ ಆದರೂ ಮುನಿರತ್ನ ಅಭ್ಯರ್ಥಿಯಾಗುವುದು ಖಚಿತ. ಯಾವ ಶಕ್ತಿಗಳೂ ಕೂಡ ಕೈ ತಪ್ಪಿಸಲು ಸಾಧ್ಯವಿಲ್ಲ ಎಂದು ಸುಧಾಕರ್ ಭರವಸೆಯಿಂದ ಹೇಳಿದರು.

TRENDING