Friday, October 23, 2020
Home ಅಂತರ್ ರಾಜ್ಯ 'ಸುಶಾಂತ್ ಸಿಂಗ್ ನಿಧನದ ಬಳಿಕ ಅಪಾರ್ಟ್ಮೆಂಟ್ ಯಾಕೆ ಸೀಲ್ ಮಾಡಿಲ್ಲ'?: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

‘ಸುಶಾಂತ್ ಸಿಂಗ್ ನಿಧನದ ಬಳಿಕ ಅಪಾರ್ಟ್ಮೆಂಟ್ ಯಾಕೆ ಸೀಲ್ ಮಾಡಿಲ್ಲ’?: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

 ಸುಶಾಂತ್ ಸಿಂಗ್ ಸಾವಿನ ಪ್ರಕರಣ ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದೆ. ಜೂನ್ 15ರಂದು ಸುಶಾಂತ್ ಸಿಂಗ್ ಮುಂಬೈನ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಸುಶಾಂತ್ ನಿಧನ ಹೊಂದಿ 4 ಇದೀಗ ತಿಂಗಳಾಗಿದೆ. ಇನ್ನೂ ಸುಶಾಂತ್ ಸಿಂಗ್ ಸಾವಿನ ಹಿಂದಿನ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಸುಶಾಂತ್ ಸಿಂಗ್ ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ.

ಸುಶಾಂತ್ ಸಿಂಗ್ ಅವರದ್ದು ಆತ್ಮಹತ್ಯೆನಾ ಅಥವಾ ಕೊಲೆನಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಆದರೆ ಇತ್ತೀಚಿಗೆ ಏಮ್ಸ್ ವೈದ್ಯರು ನೀಡಿರುವ ವರದಿಯಲ್ಲಿ ಸುಶಾಂತ್ ಸಿಂಗ್ ಕೊಲೆ ಎನ್ನುವುದನ್ನು ತಳ್ಳಿಹಾಕಿದೆ. ಸುಶಾಂತ್ ಸಿಂಗ್ ನೇಣು ಹಾಕಿಕೊಂಡು ನಿಧನಹೊಂದಿರುವುದಾಗಿ ವರದಿ ನೀಡಿದೆ.

ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಮೊದಲಿನಿಂದಲೂ ಸುಶಾಂತ್ ಪ್ರಕರಣದ ಬಗ್ಗೆ ಪ್ರಶ್ನೆ ಮಾಡುತ್ತಲೇ ಬಂದಿದ್ದಾರೆ. ಇದೀಗ ಸುಬ್ರಮಣಿಯನ್ ಸ್ವಾಮಿ ಪೊಲೀಸರ ಮುಂದೆ ಮತ್ತೊಂದು ಪ್ರಶ್ನೆ ಇಟ್ಟಿದ್ದಾರೆ. ಸುಶಾಂತ್ ಸಿಂಗ್ ನಿಧನಹೊಂದಿದ ದಿನದ ಬೆಳಗ್ಗೆ ಕಿತ್ತಾಳೆ ಜ್ಯೂಸ್ ಕುಡಿದ ಗ್ಲಾಸ್ ಅನ್ನು ಪೊಲೀಸರು ಯಾಕೆ ಸಂಗ್ರಹಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ ‘ಸುಶಾಂತ್ ಸಿಂಗ್ ನಿಧನದ ಬಳಿಕ ಮುಂಬೈ ಪೊಲೀಸರು ಅಪಾರ್ಟ್ಮೆಂಟ್ ಯಾಕೆ ಸೀಲ್ ಮಾಡಿಲ್ಲ’ ಎಂದು ಕೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ ‘ಬೆಳಗ್ಗೆ ಆರೆಂಜ್ ಜ್ಯೂಸ್. ಹಾಗಾದರೆ ಸುಶಾಂತ್ ಆರೆಂಜ್ ಜ್ಯೂಸ್ ಕುಡಿದ ಗ್ಲಾಸ್ ಅನ್ನು ಯಾಕೆ ಸಂಗ್ರಹಿಸಿಲ್ಲ. ಮುಂಬೈ ಪೊಲೀಸರು ಸುಶಾಂತ್ ವಾಸವಾಗಿದ್ದ ಅಪಾರ್ಟ್ಮೆಂಟ್ ಅನ್ನು ಯಾಕೆ ಸೀಲ್ ಮಾಡಿಲ್ಲ. ಇಂಥ ಅಸಹಜ ಸಾವಿನ ಪ್ರಕಣದಲ್ಲಿ ಪೊಲೀಸರು ಅದನ್ನು ಕಡ್ಡಾಯವಾಗಿ ಮಾಡಬೇಕಿತ್ತು’ ಎಂದು ಟ್ವೀಟ್ ಮಾಡಿದ್ದಾರೆ.

TRENDING